ಹುಬ್ಬಳ್ಳಿ : ವಿಮಾನ ಲ್ಯಾಂಡಿಂಗ್ ವೇಳೆಯಲ್ಲಿ ಟಯರ್ ಸ್ಪೋಟಗೊಂಡ ಘಟನೆ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೆ ಪ್ರಾಣ ಹಾನಿ ಸಂಭವಿಸಿಲ್ಲ.
ಕೇರಳದ ಕಣ್ಣೂರಿನಿಂದ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ನಿನ್ನೆ ಸಂಜೆಯ ವೇಳೆಯಲ್ಲಿ ಆಗಮಿಸಿದ್ದ ವಿಮಾನದ ಟೈಯರ್ ಲ್ಯಾಂಡಿಂಗ್ ವೇಳೆಯಲ್ಲಿ ಸ್ಪೋಟಗೊಂಡಿದೆ. ಆದರೆ ವಿಮಾನದ ಪೈಲೆಟ್ ಚಾಣಾಕ್ಷತೆಯಿಂದ ಸಂಭವಿಸಲಿದ್ದ ಬಾರೀ ದುರಂತವೊಂದು ತಪ್ಪಿದಂತಾಗಿದೆ.
ಇಂಡಿಗೋ 6e7979 ವಿಮಾನ ಎಂದು ತಿಳಿದು ಬಂದಿದೆ. ವಿಮಾನದಲ್ಲಿದ್ದ ಪ್ರಯಾಣಿಕರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ನಿನ್ನೆ ಸಂಜೆಯೇ ನಡೆದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ವಿಮಾನಯಾನ ಪ್ರಾಧಿಕಾರದ ಅಧಿಕಾರಿಗಳು ಘಟನೆಯ ಕುರಿತು ತನಿಖೆಯನ್ನು ಮುಂದುವರಿಸಿದ್ದಾರೆ.