ನವದೆಹಲಿ : ಜಮ್ಮು ವಿಮಾನ ನಿಲ್ದಾಣದಲ್ಲಿ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಸಿಬ್ಬಂದಿಗಳಿಗೆ ಗಾಯಗಳಾಗಿದೆ. ಸ್ಥಳಕ್ಕೆ ಬಾಂಬ್ ನಿಷ್ಕ್ರಿಯದಳ, ವಿಧಿ ವಿಜ್ಞಾನ ತಂಡ ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳು ದೌಡಾಯಿಸಿದ್ದಾರೆ.
ಇಂದು ಮುಂಜಾನೆ 4.30ರ ಸುಮಾರಿಗೆ ವಿಮಾನ ನಿಲ್ದಾಣದ ತಾಂತ್ರಿಕ ಪ್ರದೇಶದೊಳಗೆ ಸ್ಪೋಟ ಸಂಭವಿಸಿದೆ. ವಾಯು ಪಡೆಗೆ ಸೇರಿದ ಜಮ್ಮುವಿನ ವಿಮಾನ ನಿಲ್ದಾಣದೊಳಗೆ ಸ್ಫೋಟ ಸಂಭವಿಸಿದ್ದು, ಇಬ್ಬರು ಸಿಬ್ಬಂದಿಗಳಿಗೆ ಗಾಯವಾಗಿ ರುವುದನ್ನು ಹೊರತು ಪಡಿಸಿ, ಯಾವುದೇ ಹಾನಿ ಸಂಭವಿ ಸಿಲ್ಲ ಎಂದು ರಕ್ಷಣಾ ವಕ್ತಾರ ಲೆಫ್ಟಿನೆಂಟ್ ಕರ್ನಲ್ ದೇವೇಂದರ್ ಆನಂದ್ ಹೇಳಿದ್ದಾರೆ.
ಜಮ್ಮು ವಿಮಾನ ನಿಲ್ದಾಣವು ನಾಗರಿಕ ವಿಮಾನ ನಿಲ್ದಾಣ ವಲ್ಲ. ಯಾವ ಕಾರಣಕ್ಕೆ ಈ ಸ್ಪೋಟ ಸಂಭವಿಸಿದೆ ಅನ್ನೋದು ದೃಢಪಟ್ಟಿಲ್ಲ. ಈ ಹಿನ್ನೆಲೆ ಯಲ್ಲಿ ಅಧಿಕಾರಿಗಳು ತನಿಖೆಯನ್ನು ಮುಂದುವರಿಸಿದ್ದಾರೆ.