ಬೆಂಗಳೂರು : ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಫಿಕ್ಸ್ ಆಯ್ತಾ…? ಯಡಿಯೂರಪ್ಪ ನಾಳೆಯೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡ್ತಾರಾ ಅನ್ನೋ ಅನುಮಾನ ಮೂಡುತ್ತಿದೆ. ಯಾಕೆಂದ್ರೆ ಯಡಿಯೂರಪ್ಪ ನಾಳೆ ಮಧ್ಯಾಹ್ನದ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಿದ್ದಾರೆ.
ನಾಳೆ ಬೆಳಗ್ಗೆ 9 ಗಂಟೆಗೆ ಕಾರ್ಗಿಲ್ ವಿಜಯ ದಿವಸ್ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ನಂತರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯ ವರೆಗೆ ನಡೆಯಲಿರುವ ಸಾಧನಾ ಸಮಾವೇಶದಲ್ಲಿಯೂ ಪಾಲ್ಗೋಳ್ಳಲಿದ್ದಾರೆ. ಆದರೆ ಮಧ್ಯಾಹ್ನದ ನಂತರದ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಿದ್ದಾರೆ. ಏಕಾಏಕಿಯಾಗಿ ಸಿಎಂ ತಮ್ಮ ಕಾರ್ಯಕ್ರಮವನ್ನು ಮಧ್ಯಾಹ್ನದ ವರೆಗೆ ಮಾತ್ರವೇ ಯಾಕೆ ಮೊಕಟುಗೊಳಿಸಿದ್ರು ಅನ್ನೋದು ಕುತೂಹಲ ಮೂಡಿಸಿದೆ.
ಇದನ್ನೂ ಓದಿ : ಶಿಕ್ಷಕಿ ಮೇಲೆ ಆಸಿಡ್ ದಾಳಿ : ಜೀವಾವಧಿ ಶಿಕ್ಷೆ, 10 ಲಕ್ಷ ದಂಡ ವಿಧಿಸಿದ ಹೈಕೋರ್ಟ್
ಸಿಎಂ ಯಡಿಯೂರಪ್ಪ ಅವರಿಗೆ ಈಗಾಗಲೇ ಹೈಕಮಾಂಡ್ ಸೂಚನೆಯನ್ನು ನೀಡಿದೆ. ಅದೇ ಕಾರಣಕ್ಕೂ ತಮ್ಮ ಕಾರ್ಯ ಕಲಾಪವನ್ನು ಸಿಎಂ ರದ್ದು ಮಾಡಿದ್ದಾರಾ ಅನ್ನೋ ಅನುಮಾನ ವ್ಯಕ್ತವಾಗುತ್ತಿದೆ. ಅಲ್ಲದೇ ಯಡಿಯೂರಪ್ಪ ಇಂದು ಅಥವಾ ನಾಳೆ ರಾಜ್ಯಪಾಲರನ್ನ ಭೇಟಿಯಾಗುವ ಸಾಧ್ಯತೆಯಿದೆ. ಇದೆಲ್ಲವನ್ನೂ ನೋಡಿದ್ರೆ ಯಡಿಯೂರಪ್ಪ ರಾಜೀನಾಮೆಗೆ ಸಿದ್ದವಾದಂತೆ ಕಾಣುತ್ತಿದೆ.