ನವದೆಹಲಿ : ಮದ್ಯಪ್ರಿಯರಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್ ಕೊಟ್ಟಿದೆ. ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮದ್ಯದಂಗಡಿಗೆ ತೆರೆಯಲು ಲೈಸೆನ್ಸ್ ನೀಡಬಾರದು ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿತ್ತು.

ರಾಷ್ಟ್ರೀಯ 500 ಹೆದ್ದಾರಿಗಳಲ್ಲಿ ಹಾಗೂ ರಾಜ್ಯ ಹೆದ್ದಾರಿಗಳಲ್ಲಿ 220 ಮೀಟರ್ ವ್ಯಾಪ್ತಿಯೊಳಗೆ ಯಾವುದೇ ಮದ್ಯ ಮಾರಾಟದ ಅಂಗಡಿಗೆ ಲೈಸೆನ್ಸ್ ನೀಡಬಾರದು ಎಂದಿದೆ. ಅಲ್ಲದೇ ಇನ್ನು ಸ್ಥಳೀಯಾಡಳಿತ ವ್ಯಾಪ್ತಿಯಲ್ಲಿರುವ ಹಾಗೂ 20 ಸಾವಿರಕ್ಕಿಂತ ಕಡಿಮೆ ಜನರು ವಾಸಿಸುವ ಸ್ಥಳಗಳಲ್ಲಿ ರಾಜ್ಯ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಇನ್ಮುಂದೆ ಮದ್ಯ ಮಾರಾಟಕ್ಕೆ ಅವಕಾಶ ನೀಡಬಾರದು ಎಂದು ಹೇಳಿದೆ.

ಇನ್ಮುಂದೆ ಮದ್ಯದಂಗಡಿಗೆ ಲೈಸೆನ್ಸ್ ನೀಡುವಾಗ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ. ಅಲ್ಲದೇ ಹೆದ್ದಾರಿ ಅಕ್ಕ ಪಕ್ಕದಲ್ಲಿ ಎಷ್ಟು ಮದ್ಯದಂಗಡಿ ಇದೆ ಅನ್ನುವ ಕುರಿತು ರಾಜ್ಯ ಸರಕಾರ ಮಾಹಿತಿಯನ್ನು ಕಲೆ ಹಾಕಬೇಕಾಗಿದೆ.

ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ. ಈ ಹಿಂದೆ ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿನ ಮದ್ಯದಂಗಡಿಗಳನ್ನು ಬೇರೆಡೆಗೆ ಶಿಫ್ಟ್ ಮಾಡಲಾಗಿತ್ತು. ಇದೀಗ ಸುಪ್ರೀಂ ಕೋರ್ಟ್ ಮದ್ಯದಂಗಡಿ ಆರಂಭಕ್ಕೆ ಸಂಬಂಧಿಸಿದಂತೆ ಮಹತ್ವದ ಆದೇಶ ಹೊರಡಿಸಿದೆ.