ಹಾವೇರಿ : ಕರ್ನಾಟಕ ನೂತನ ಮಂತ್ರಿ ಮಂಡಲದಲ್ಲಿ ಮೊಗವೀರ ಸಮಾಜದ ಶಾಸಕರಿಗೆ ಸಚಿವ ಸ್ಥಾನವನ್ನು ನೀಡಬೇಕು ಎಂದು ಹಾವೇರಿಯ ನರಸೀಪುರದ ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಗುರುಪೀಠದ ಪೀಠಾಧ್ಯಕ್ಷ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ ಆಗ್ರಹಿಸಿದ್ದಾರೆ.
ನೂತನ ಮುಖ್ಯಮಂತ್ರಿಗಳಾಗಿ ಆಯ್ಕೆಯಾಗಿದ್ದ ಬಸವರಾಜ ಬೊಮ್ಮಾಯಿ ಅವರಿಗೆ ಗುರುಪೀಠದ ವತಿಯಿಂದ ಅಭಿನಂದನೆಯನ್ನು ಸಲ್ಲಿಸಿದ ಸ್ವಾಮೀಜಿ ಅವರು, 39 ಪರ್ಯಾಯ ಪದಗಳಿಂದ ಗುರುಯಿಸಿಕೊಂಡಿರುವ ಕೋಳಿ, ಕಬ್ಬಲಿಗ, ಅಂಬಿಗ, ಬೆಸ್ತ, ಗಂಗಾಮತ ಸಮಾಜಕ್ಕೆ ಸಚಿವ ಸ್ಥಾನ ನೀಡಬೇಕೆಂದು ಅವರು ಆಗ್ರಹಿಸಿದ್ದಾರೆ.
ಸಮಾಜದಲ್ಲಿ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್, ರವಿ ಕುಮಾರ್, ಸಾಬಣ್ಣ ತಳವಾರ್ ಅವರು ರಾಜಕೀಯವಾಗಿ ಗುರುತಿಸಿಕೊಂಡಿದ್ದಾರೆ. ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಅವರು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಹೀಗಾಗಿ ಈ ಬಾರಿ ಸಂಪುಟ ವಿಸ್ತರಣೆಯ ವೇಳೆಯಲ್ಲಿ ಸಮಾಜವನ್ನು ಪರಿಗಣಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.