ನವದೆಹಲಿ : ಇತ್ತೀಚಿನ ವರ್ಷಗಳಲ್ಲಿ ಹಲವು ಬ್ಯಾಂಕುಗಳು ದಿವಾಳಿಯಾಗಿವೆ. ಇದರಿಂದಾಗಿ ಲಕ್ಷಾಂತರ ಮಂದಿ ಠೇವಣಿದಾರರು ಹಣ ಕಳೆದುಕೊಂಡು ಕಂಗಾಲಾಗಿದ್ದಾರೆ. ಇಂತಹ ಗ್ರಾಹಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಗುಡ್ನ್ಯೂಸ್ ಕೊಟ್ಟಿದೆ.
ಬ್ಯಾಂಕುಗಳಲ್ಲಿ ಠೇವಣಿ ಇಟ್ಟಿರುವ ಗ್ರಾಹಕರ ರಕ್ಷಣೆಗಾಗಿ ಕೇಂದ್ರ ಸರಕಾರ ವಿಮೆ ಖಾತರಿ ಮೊತ್ತವನ್ನು 1 ಲಕ್ಷ ರೂಪಾಯಿಯಿಂದ 5 ಲಕ್ಷ ರೂಪಾಯಿಗೆ ಏರಿಕೆ ಮಾಡಿದೆ. ಇದರಿಂದಾಗಿ ಸಹಕಾರಿ ಬ್ಯಾಂಕುಗಳಲ್ಲಿ ಠೇವಣಿ ಇಟ್ಟಿರುವ ಲಕ್ಷಾಂತರ ಗ್ರಾಹಕರಿಗೆ ಅನುಕೂಲವಾಗಲಿದೆ.
ಕೇಂದ್ರ ಸರಕಾರ ಹಳೆಯ ನಿಮಯದಲ್ಲಿ ಬದಲಾವಣೆ ತಂದಿದೆ. ಕೇಂದ್ರ ಸರಕಾರದ ವಿಮೆ ಖಾತರಿ ಮೊತ್ತ ಸಾರ್ವಜನಿಕ ಹಾಗೂ ಖಾಸಗಿ ಬ್ಯಾಂಕುಗಳಿಗೆ ಮಾತ್ರವಲ್ಲದೇ ಈ ನಿಮಯ, ವಿಮೆ ಖಾತರಿ, ಸಹಕಾರಿ ಬ್ಯಾಂಕುಗಳು, ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದ ಸಹಕಾರ ಸೊಸೈಟಿ ರಿಜಿಸ್ಟರ್ ಅಡಿಯಲ್ಲಿ ನೊಂದಾಯಿತ ಹಣಕಾಸು ಸಂಸ್ಥೆಗಳಿಗೂ ಅನ್ವಯವಾಗಲಿದೆ.
ಈ ನಿಯಮದ ಪ್ರಕಾರ ನೀವು ಠೇವಣಿ ಇಟ್ಟಿರುವ ಬ್ಯಾಂಕುಗಳು ದಿವಾಳಿಯಾದ್ರೆ ನಿಮಗೆ ಕನಿಷ್ಠ ಐದು ಲಕ್ಷ ರೂಪಾಯಿ ಪರಿಹಾರ ಲಭ್ಯವಾಗಲಿದೆ. ಸರಕಾರ ಈ ನಿಮಯದಿಂದ ಕೋಟ್ಯಾಂತರ ಠೇವಣಿದಾರರಿಗೆ ಅನುಕೂಲವಾಗಲಿದೆ.
( Have Deposits in Cooperative Banks: Good News from Central Government )