ಮುಂಬೈ : YES ಬ್ಯಾಂಕ್ ಸಂಸ್ಥಾಪಕ ರಾಣಾ ಕಪೂರ್ ಅವರ ಮುಂಬೈ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆರ್ ಬಿಐ YES ಬ್ಯಾಂಕ್ ನ್ನು ಸೂಪರ್ ಸೀಡ್ ಮಾಡಿತ್ತು. ಇದರಿಂದಾಗಿ ಬೆಳಗಿಂದಲೇ ಗ್ರಾಹಕರು ಪರದಾಡೋ ಸ್ಥಿತಿ ನಿರ್ಮಾಣವಾಗಿತ್ತು. ಇದರ ಬೆನ್ನಲ್ಲೇ ಇಡಿ ದಾಳಿ ನಡೆದಿದೆ.

YES ಬ್ಯಾಂಕ್ ಸಂಸ್ಥಾಪಕರಾಗಿದ್ದ ರಾಣಾ ಕಪೂರ್ 2018ರಲ್ಲಿ ತನ್ನ ಹುದ್ದೆಗೆ ರಾಜೀನಾಮೆ ನೀಡಿದ್ದರು. ಕಳೆದ ಎರಡು ವರ್ಷಗಳಿಂದಲೂ ರಾಣಾ ಕಪೂರ್ ಬ್ಯಾಂಕ್ ಜೊತೆಗೆ ಸಂಪರ್ಕದಲ್ಲಿ ಇರಲಿಲ್ಲ. ಆದ್ರೆ ಅಕ್ರಮವಾಗಿ ಹಣ ಸಾಗಾಟ ಮಾಡಿದ ಆರೋಪ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದ ಎನ್ನಲಾಗುತ್ತಿದೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ ಸಂರ್ಭದಲ್ಲಿ ರಾಣಾಸಿಂಗ್ ಮನೆಯಲ್ಲಿ ಇರಲಿಲ್ಲ. ಹೀಗಾಗಿ ರಾಣಾ ಸಿಂಗ್ ಗಾಗಿ ಇಡಿ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ. ಮಾತ್ರವಲ್ಲ ನಿವಾಸದಲ್ಲಿ ದಾಖಲೆಗಳಲ್ಲಿ ಪರಿಶೀಲಿಸುತ್ತಿದ್ದಾರೆ.

YESಬ್ಯಾಂಕ್ ದೇಶದಲ್ಲಿ ಸುಮಾರು 1,222 ಬ್ಯಾಂಕ್ ಶಾಖೆಗಳನ್ನು ಹೊಂದಿದ್ದು, 1,337 ಎಟಿಎಂ ಹೊಂದಿದೆ. 2.09 ಲಕ್ಷ ಕೋಟಿ ರೂಪಾಯಿ ಠೇವಣಿಯನ್ನು ಹೊಂದಿದ್ದು, 2.25 ಲಕ್ಷ ಕೋಟಿ ಸಾಲ ನೀಡಲಾಗಿದೆ. ಬ್ಯಾಂಕ್ ಹೆಸರಲ್ಲಿ 3.47 ಲಕ್ಷ ಕೋಟಿ ರೂಪಾಯಿ ಆಸ್ತಿಯನ್ನು ಹೊಂದಿದ್ದು, 17,134 ಕೋಟಿ ಸಾಲ ಹೊಂದಿದೆ. ಇದೀಗ ಬ್ಯಾಂಕ್ ಸೂಪರ್ ಸೀಡ್ ಆಗಿರೋದ್ರಿಂದಾಗಿ ಗ್ರಾಹಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇನ್ನೊಂದೆಡೆ ಮನಿಲಾಂಡ್ರಿಂಗ್ ಪ್ರಕರಣದಲ್ಲಿ ಬ್ಯಾಂಕಿನ ಸಂಸ್ಥಾಕನ ಮೇಲೆ ಇಡಿ ಕಣ್ಣಿಟ್ಟಿದೆ. ಇದೀಗ ರಾಣಾ ಕಪೂರ್ ವಿರುದ್ದ ಲುಕ್ ಔಟ್ ನೊಟೀಸ್ ಜಾರಿ ಮಾಡಿದೆ.