ಬೆಂಗಳೂರು : ಆದಾಯ ಮೀರಿ ಆಸ್ತಿ ಸಂಪಾದನೆಯ ಆರೋಪದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ( ಇಡಿ) ಈಗಾಗಲೇ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ ಬುಲಾವ್ ನೀಡಿದೆ. ಈ ಹಿನ್ನೆಲೆಯಲ್ಲಿ ಅವರು ದೆಹಲಿಗೆ ತೆರಳಿದ್ದಾರೆ.
ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ ಸೇರಿದ ಮನೆ, ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಹಾಗೂ ಆಪ್ತರ ಮನೆಗಳ ಮೇಲೆ ಇಡಿ ದಾಳಿಯನ್ನ ನಡೆಸಿತ್ತು. ದಾಳಿಯ ವೇಳೆಯಲ್ಲಿ ಮಹತ್ವದ ದಾಖಲೆಗಳು ಲಭ್ಯವಾಗಿದೆ ಎಂದು ಹೇಳಲಾಗಿತ್ತು. ಆದರೆ ಜಮೀರ್ ಅಹ್ಮದ್ ಖಾನ್ ಎಲ್ಲಾ ದಾಖಲೆಗಳನ್ನೂ ನೀಡಿದ್ದೇನೆ ಎಂದು ಹೇಳಿದ್ದರು.
ಇದನ್ನೂ ಓದಿ : ಜಮೀರ್ ಮನೆ ಮೇಲೆ ನಡೆದಿದ್ದು ಐಟಿ ಅಲ್ಲಾ ಇಡಿ ದಾಳಿ : ಉರುಳಾಗುತ್ತಾ ಐಎಂಎ ಕೇಸ್
ಇದೀಗ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದ ಹಿನ್ನೆಲೆ ವಿಚಾರಣೆಗೆ ದೆಹಲಿಗೆ ತೆರಳಿದ್ದಾರೆ. ಈ ವೇಳೆಯಲ್ಲಿ ಪೂರಕ ದಾಖಲೆಗಳನ್ನು ಅಧಿಕಾರಿಗಳಿಗೆ ಸಲ್ಲಿಕೆ ಮಾಡುವ ಸಾಧ್ಯತೆ ಯಿದೆ. ಇನ್ನು ದೆಹಲಿಗೆ ತೆರಳುವ ಮೊದಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಒಂದೊಮ್ಮೆ ಆದಾಯ ಮೀರಿ ಆಸ್ತಿಯನ್ನು ಸಂಪಾದನೆ ಮಾಡಿದ್ದರೆ ಜಮೀರ್ ಅಹ್ಮದ್ ಖಾನ್ ಅವರನ್ನು ಇಡಿ ವಶಕ್ಕೆ ಪಡೆಯುವ ಸಾಧ್ಯತೆಯಿದೆ.
ಇದನ್ನೂ ಓದಿ : ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ಗೆ ಐಟಿ ಶಾಕ್