ಮಂಗಳವಾರ, ಜೂನ್ 17, 2025
HomeCrimeMysore : ಮೈಸೂರಿನ ಜನರನ್ನ ಬೆಚ್ಚಿ ಬೀಳಿಸಿದೆ ಗ್ಯಾಂಗ್‌ ರೇಪ್‌ ಪ್ರಕರಣ

Mysore : ಮೈಸೂರಿನ ಜನರನ್ನ ಬೆಚ್ಚಿ ಬೀಳಿಸಿದೆ ಗ್ಯಾಂಗ್‌ ರೇಪ್‌ ಪ್ರಕರಣ

- Advertisement -

ಮೈಸೂರು : ಹೆಣ್ಣಿನ ಮೇಲೆ ದಿನದಿಂದ ದಿನಕ್ಕೆ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿದೆ.  ಇದೀಗ ಮೈಸೂರಿನ ಪ್ರತಿಷ್ಠಿತ ಖಾಸಗಿ ಕಾಲೇಜು ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್  ನಡೆದಿದ್ದು, ಅರಮನೆ ನಗರಿಯ ಜನರನ್ನು ಬೆಚ್ಚಿ ಬೀಳಿಸಿದೆ.

ಹೊರ ರಾಜ್ಯದಿಂದ ವ್ಯಾಸಂಗಕ್ಕೆ ಬಂದು ಖಾಸಗಿ ಕಾಲೇಜಿನಲ್ಲಿ ಶಿಕ್ಷಣ ಪಡೆಯುತ್ತಿರುವ ಎಂಬಿಎ ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯನೊಂದಿಗೆ ಚಾಮುಂಡಿ ಬೆಟ್ಟದ ತಪ್ಪಲಿನ ಲಲಿತಾದ್ರಿಪುರ ಬಳಿ ತೆರಳಿತ್ತು. ಈ ವೇಳೆಯಲ್ಲಿ ಐದಾರು ಮಂದಿ ಯುವಕರ ತಂಡ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್ ರೇಪ್ ನಡೆಸಿದೆ ಎನ್ನಲಾಗಿದೆ.

ಇದನ್ನೂ ಓದಿ: 12 ರ ಬಾಲಕಿ ಮೇಲೆ ಅಪ್ರಾಪ್ತರಿಂದ ಅತ್ಯಾಚಾರ: ಸಂತ್ರಸ್ಥೆಗೆ ಮಗು ಜನಿಸಿದ ಬಳಿಕ ಬಹಿರಂಗವಾಯ್ತು ಕೃತ್ಯ

6 ಮಂದಿ ದುಷ್ಕರ್ಮಿಗಳು ಯುವಕನಿಗೆ ಹಲ್ಲೆ ಮಾಡಿ, ನಂತರ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅತ್ಯಾಚಾರ ನಡೆದ ಬಳಿಕ ವಿದ್ಯಾರ್ಥಿನಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎನ್ನಲಾಗಿದೆ.

ಈ ಗ್ಯಾಂಗ್​ರೇಪ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್​ ದಾಖಲಾಗಿದೆ. ಇದೀಗ ಆರೋಪಿಗಳ ಪತ್ತೆಗೆ ಮೈಸೂರು ಪೊಲೀಸರು ಬಲೆ ಬೀಸಿದ್ದಾರೆ. ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ​ ಪ್ರಕರಣದ ಆರೋಪಿಗಳ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಸಂತ್ರಸ್ತೆ ಸ್ನೇಹಿತನಿಂದ ಮಾಹಿತಿ ಪಡೆಯುತ್ತಿದ್ದಾರೆ. ಅತ್ಯಾಚಾರ ಎಸಗಿದವರು ಪರಿಚಯಸ್ಥರೇ ಎಂಬ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ :ದೇವರ ದರ್ಶನಕ್ಕೆ ಬಂದವ ಈಜಲು ನಾಲೆಗೆ ಇಳಿದ : ಸ್ನೇಹಿತನ ರಕ್ಷಣೆಗೆ ಇಳಿದ ಮೂವರು ನೀರು ಪಾಲು

RELATED ARTICLES

Most Popular