ಮೈಸೂರು : ಎಂಬಿಎ ವಿದ್ಯಾರ್ಥಿನಿ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣ ದೇಶವನ್ನೇ ಬೆಚ್ಚಿ ಬೀಳಿಸಿದೆ. ಚಾಮುಂಡಿ ಸನ್ನಿದಾನದ ಸಮೀಪದಲ್ಲಿ ನೀಚ ಕೃತ್ಯವೆಸಗಿದ ಕಾಮುಕರ ಬಲೆಗೆ ಪೊಲೀಸರು ಬಲೆ ಬೀಸಿದ್ದಾರೆ. ಇನ್ನೊಂದೆಡೆ ಕಾಮುಕರನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಬೀದಿಗಳಿದು ಪ್ರತಿಭಟನೆ ನಡೆಸಿದ್ದಾರೆ.
ಮೈಸೂರು ನಗರದ ರಾಮಸ್ವಾಮಿ ವೃತ್ತದ ಬಳಿ ಎಬಿವಿಪಿ ನೇತೃತ್ವದಲ್ಲಿ ಕಾಲೇಜು ವಿದ್ಯಾರ್ಥಿಗಳು ಗುರುವಾರ ಪ್ರತಿಭಟನೆ ನಡೆಸಿದ್ದಾರೆ. ಮೈಸೂರಿನಲ್ಲಿ ನಡೆದಿರುವ ಪೈಶಾಚಿಕ ಕೃತ್ಯದಿಂದಾಗಿ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲ ಅನ್ನೋ ಸ್ಥಿತಿ ನಿರ್ಮಾಣವಾಗಿದೆ. ಹೆಣ್ಣು ಮಕ್ಕಳಿಗೆ ಪೊಲೀಸರು ಸೂಕ್ತ ರಕ್ಷಣೆಯನ್ನು ನೀಡಬೇಕು. ಮಾತ್ರವಲ್ಲ ನಗರದ ಹೊರವಲಯದಲ್ಲಿ ಸಿಸಿ ಕ್ಯಾಮರಾ ಅಳವಡಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ಇದನ್ನೂ ಓದಿ: Jaggesh: ಹೆಣ್ಣುಮಕ್ಕಳನ್ನು ಗೌರವಿಸದವರು ರಾಕ್ಷಸರು: ಮೈಸೂರು ಕೃತ್ಯಕ್ಕೆ ನವರಸನಾಯಕ ಜಗ್ಗೇಶ್ ಖಂಡನೆ
ಇನ್ನೊಂದೆಡೆ ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಘಟನೆ ಖಂಡಿಸಿ ಕಲಬುರಗಿಯಲ್ಲಿಯೂ ಪ್ರತಿಭಟನೆ ನಡೆದಿದೆ. ನಗರದ ಎಸ್ವಿಪಿ ವೃತ್ತದಲ್ಲಿ ನಾಲ್ಕು ಚಕ್ರ ತಂಡದ ಸದಸ್ಯರು ಕಪ್ಪು ಬಟ್ಟೆ ಕಟ್ಟಿಕೊಂಡು ಪ್ರತಿಭಟನೆ ನಡೆಸಿದರು. ಅತ್ಯಾಚಾರಿಗಳನ್ನು ಗುಂಡಿಕ್ಕಿ ಕೊಲ್ಲುವಂತೆ ಆಗ್ರಹಿಸಿದರು.
ಇದನ್ನೂ ಓದಿ: ಯುವತಿಯ ವಿಡಿಯೋ ಮಾಡಿ 3 ಲಕ್ಷಕ್ಕೆ ಬೇಡಿಕೆಯಿಟ್ಟ ಕಾಮುಕರು : ಮೊಬೈಲ್ ಟವರ್ ಆಧರಿಸಿ ತನಿಖೆ