ಬೆಂಗಳೂರು : ಮೈಸೂರಿನಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣ ಬೇಧಿಸಿದ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಸ್ಯಾಂಡಲ್‌ವುಡ್ ಹಿರಿಯ ನಟ ಜಗ್ಗೇಶ್ ಅವರು ಪೊಲೀಸರಿಗೆ 1ಲಕ್ಷ ರೂ. ಬಹುಮಾನ ಘೋಷಣೆ ಮಾಡಿದ್ದರು. ಇದೀಗ ಪತ್ನಿ ಸಮೇತರಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರಿಗೆ ಚೆಕ್ ಹಸ್ತಾಂತರಿಸಿದ್ದಾರೆ.
ವಿದ್ಯಾರ್ಥಿನಿ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿತ್ತು. ಘಟನೆ ನಡೆಯುತ್ತಿದ್ದಂತೆಯೇ ನಟ ಜಗ್ಗೇಶ್ ಅವರು, ಹೆಣ್ಣು ಗೌರವಿಸದವರು ರಕ್ಕಸರು. ಈ ಕೃತ್ಯ ಎಸಗಿದ ಕ್ರೂರಿಗಳು ಗಲ್ಲು ಶಿಕ್ಷೆಗೆ ಅರ್ಹರು. ಈ ಕ್ರೂರ ಕೃತ್ಯಕ್ಕೆ ಖಂಡನೆ ವ್ಯಕ್ತಪಡಿಸಿದ್ದರು.
ಸಂತ್ರಸ್ತೆಯ ಹೇಳಿಕೆ ಇಲ್ಲದೇ ಕೇವಲ ತಾಂತ್ರಿಕ ಸಾಕ್ಷಿಯನ್ನಿಟ್ಟುಕೊಂಡು ಆರೋಪಿಗಳನ್ನು ಬಂಧಿಸಿದ ಪೊಲೀಸರ ಕಾರ್ಯಕ್ಕೆ ನಟ ಜಗ್ಗೇಶ್ ಅವರು ಅಭಿನಂದನೆ ಸಲ್ಲಿಸಿದ್ದರು. ಈ ಕುರಿತು ಟ್ವೀಟ್ ಮಾಡಿದ್ದ ಅವರು, ಕಾಲೇಜು ವಿದ್ಯಾರ್ಥಿ ಅತ್ಯಾಚಾರ ಮಾಡಿದ ಕಾಮಪಿಪಾಸುಗಳ ಬಂಧಿಸಿದ ನನ್ನ ಕರುನಾಡಿನ ಹೆಮ್ಮೆಯ ಆರಕ್ಷಕರಿಗೆ ನನ್ನ ವೈಯಕ್ತಿಕ ಅಭಿನಂದನೆಗಳು. ನನ್ನ ಕಡೆಯಿಂದ ಪ್ರಕರಣ ಬೇಧಿಸಿದ ನಲ್ಮೆಯ ನನ್ನ ಪೊಲೀಸರಿಗೆ 1 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಣೆಯನ್ನು ಮಾಡಿದ್ದರು.
ಇದೀಗ ನಟ ಜಗ್ಗೇಶ್ ಅವರು ಪತ್ನಿ ಪರಿಮಳ ಜಗ್ಗೇಶ್ ಅವರೊಂದಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಭೇಟಿಯಾಗಿ 1 ಲಕ್ಷ ರೂಪಾಯಿಯ ಚೆಕ್ ಹಸ್ತಾಂತರಿಸಿದ್ದಾರೆ. ಅಲ್ಲದೇ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನು ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಜಗ್ಗೇಶ್ ಅವರಿಗೆ ಅಭಿನಂದನೆ ಸಲ್ಲಸಿದ್ದಾರೆ.
ಇದನ್ನೂ ಓದಿ :
ಮೈಸೂರು ಸಾಮೂಹಿಕ ಅತ್ಯಾಚಾರ : ಐವರು ಆರೋಪಿಗಳ ಬಂಧನ, ಓರ್ವ ಅಪ್ರಾಪ್ತ : ಡಿಜಿ-ಐಜಿಪಿ ಪ್ರವೀಣ್ ಸೂದ್
Mangalore : ಯುವತಿಯ ನಗ್ನ ವಿಡಿಯೋ ಕಾಲ್‌ಗೆ ಬೆತ್ತಲಾದ ಆಟೋ ಚಾಲಕ : ವಾರದಲ್ಲೇ ವೈರಲ್ ಆಯ್ತು ವಿಡಿಯೋ