ಮೈಸೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸರ್ಕಾರ ಉತ್ತಮ ಆಡಳಿತ ನಡೆಸುತ್ತಿದ್ದು, ರಾಜ್ಯದ ಹಿತದೃಷ್ಟಿ ಪರಿಗಣಿಸಿ ಕೆಲಸ ಮಾಡುತ್ತಿದೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅರುಣ್ ಸಿಂಗ್, ನಮ್ಮದು ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ದೊಡ್ಡ ನಾಯಕ. ಬಿ.ಎಸ್.ಯಡಿಯೂರಪ್ಪ ಅವರಿಗೆ ಸಂಘಟನೆ ಬಗ್ಗೆ ಅನುಭವವಿದೆ. ಅವರ ಅವರ ಅನುಭವನ್ನು ಪಕ್ಷ ಸಮಘಟನಗೆ ಬಳಸಿಕೊಳ್ಳುತ್ತೇವೆ ಎಂದರು.
ಇನ್ನು ರಾಜ್ಯ ಸಚಿವ ಸಂಪುಟದಲ್ಲಿ ಯಾವುದೇ ಗೊಂದಲ ಇಲ್ಲ. ಖಾತೆ ಹಂಚಿಕೆಯಲ್ಲಿ ಸಿಎಂ ಬೊಮ್ಮಾಯಿಗೆ ಪರಮಾಧಿಕಾಆರ ಇದೆ. ಖಾತೆ ಹಂಚಿಕೆಯಲ್ಲಿ ನಮ್ಮ ಪಾತ್ರ ಇಲ್ಲ. ಖಾತೆ ಹಂಚಿಕೆಯಾಗಿದೆ. ಎಲ್ಲ ಸಚಿವರು ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: MYSORE : ಮೈಸೂರು ಪಾಲಿಕೆಯಲ್ಲಿ ಇತಿಹಾಸ ಸೃಷ್ಟಿಸಿದ ಬಿಜೆಪಿ : ಸುನಂದಾ ಪಾಲನೇತ್ರ ಹೊಸ ಮೇಯರ್
(CM Bommai government is giving good governance: Arun Singh)