ಚಾಮರಾಜನಗರ: ಕೊರೋನಾ ವಾಕ್ಸಿನ್ ಉಚಿತವಾಗಿ ನೀಡಲಾಗುತ್ತಿದ್ದರೂ ಗ್ರಾಮೀಣ ಪ್ರದೇಶದ ಜನರು ಲಸಿಕೆ ಹಾಕಿಸಿಕೊಳ್ಳಲು ನಿರ್ಲಕ್ಷ್ಯ ತೋರುತ್ತಿದ್ದಾರೆ. ಹೀಗಾಗಿ ಜನರಲ್ಲಿ ಲಸಿಕೆ ಬಗ್ಗೆ ಅರಿವು ಮೂಢಿಸಲು ಚಾಮರಾಜನಗರ ಡಿಸಿ ಕಟ್ಟುನಿಟ್ಟಿನ ಆದೇಶ ನೀಡಿದ್ದು, ಲಸಿಕೆ ಹಾಕಿಸಿಕೊಳ್ಳದಿದ್ದರೇ ನೋ ರೇಷನ್, ನೋ ಪೆನ್ಸನ್ ಎಂದಿದ್ದಾರೆ.

ಚಾಮರಾಜನಗರ ಜಿಲ್ಲೆಯಾದ್ಯಂತ ಲಸಿಕೆ ನೀಡಲಾಗುತ್ತಿದ್ದರೂ ಜನರು ನೀರಿಕ್ಷಿತ ಪ್ರಮಾಣದಲ್ಲಿ ಲಸಿಕೆ ಅಭಿಯಾನಕ್ಕೆ ಸ್ಪಂದಿಸುತ್ತಿಲ್ಲ. ಹೀಗಾಗಿ ಲಸಿಕೆ ಹಾಕಿಸಿಕೊಳ್ಳದಿದ್ದರೇ ರೇಷನ್ ನೀಡದಿರಲು ಪಡಿತರ ಅಂಗಡಿಗಳಿಗೆ ಡಿಸಿ ಸೂಚನೆ ನೀಡಿದ್ದಾರೆ.

ಮಾತ್ರವಲ್ಲ ಲಸಿಕೆ ಪ್ರಮಾಣ ಪತ್ರ ತೋರಿಸದಿದ್ದರೇ ತಿಂಗಳ ಮಾಸಾಶನಗಳನ್ನು ಬಿಡುಗಡೆ ಮಾಡದಂತೆ ಬ್ಯಾಂಕ್ ಗಳಿಗೂ ಜಿಲ್ಲಾಧಿಕಾರಿಗಳಿಗೂ ಸೂಚನೆ ರವಾನಿಸಿದ್ದಾರೆ. ಈ ಬಗ್ಗೆ ವಿವರಣೆ ನೀಡಿರುವ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ, ಲಸಿಕೆ ಹಾಕಿಸಿಕೊಳ್ಳಲು ಕೆಲವರು ಉದಾಸೀನ ತೋರುತ್ತಿದ್ದಾರೆ. ಹೀಗಾಗಿ ಲಸಿಕೆ ಹಾಗೂ ಆರೋಗ್ಯದ ಬಗ್ಗೆ ಅರಿವು ಮೂಡಿಸಲು ಈ ಕ್ರಮಕೈಗೊಳ್ಳಲಾಗಿದೆ ಎಂದಿದ್ದಾರೆ.
ಚಾಮರಾಜನಗರದಲ್ಲಿ ಒಟ್ಟು 2 ಲಕ್ಷ 90 ಸಾವಿರ ಅಂತ್ಯೋದರ ಪಡಿತರದಾರರಿದ್ದು, ಅಲ್ಲದೇ ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ,ವಿಧವಾ ವೇತನ,ಅಂಗವಿಕಲ ವೇತನ ಸೇರಿದಂತೆ 2 ಲಕ್ಷ 20 ಸಾವಿರ ಫಲಾನುಭವಿಗಳಿದ್ದಾರೆ.
Chamraj nagara dc strict order to promote corona vaccine.