ಉಪ್ಪಿನಂಗಡಿ : ಕೆಎಸ್ಆರ್ ಟಿಸಿ ಬಸ್ ಹಾಗೂ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಕಾರು ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿರೋ ಘಟನೆ ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ನಡೆದಿದೆ.

ಕಡಬ ತಾಲೂಕಿನ ಕುಟ್ರುಪ್ಪಾಡಿಯ ಮೀನಾಡಿ ನಿವಾಸಿ ದಯೇಶ್ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ಕೆಎಸ್ಆರ್ ಟಿಸಿ ಬಸ್ ಕಡಬದಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದಿದೆ.

ಢಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ಕಾರಿನಲ್ಲಿ ಸಿಲುಕಿದ್ದ ದಯೇಶ್ ನನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿಯೇ ಸಾವನ್ನಪ್ಪಿದ್ದಾನೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರೋ ಉಪ್ಪಿನಂಗಡಿ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.