ಮೈಸೂರು : ಸರಕಾರಿ ಅಧಿಕಾರಿ ತನ್ನ ಪತ್ನಿಯನ್ನೇ ಕೊಲೆ ಯತ್ನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಯ ಪತ್ನಿ ನಾಗವೇಣಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಸಹಾಯಕ ಶಿಶುಯೋಜನಾ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ವೆಂಕಟಪ್ಪ ಆರೋಪಿತ ಅಧಿಕಾರಿ. ವೆಂಕಟಪ್ಪ ಹಾಗೂ ನಾಗವೇಣಿ ನಡುವೆ ಮನಸ್ಥಾಪ ಉಂಟಾಗಿ ವೆಂಕಟಪ್ಪ ನಾಗವೇಣಿ ಅವರಿಗೆ ದೈಹಿಕ ಮತ್ತು ಮಾನಸಿಕವಾಗಿ ಹಲ್ಲೆ ನಡೆಸಿದ್ದ, ಅಲ್ಲದೇ ಮಾರ್ಚ್ 3 ರಂದು ಮನೆಯಲ್ಲಿ ನೇಣು ಬಿಗಿದು ಕೊಲೆಗೆ ಯತ್ನಿಸಿದ್ದಾನೆ ಅಂತಾ ನಾಗವೇಣಿ ಪೋಷಕರು ಆರೋಪಿಸಿದ್ದಾರೆ.

ತೀವ್ರವಾಗಿ ಅಸ್ವಸ್ಥಳಾಗಿದ್ದ ನಾಗವೇಣಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ನಾಗವೇಣಿ ಸಾವನ್ನಪ್ಪಿದ್ದಾಳೆ. ಇದೀಗ ಮೃತ ನಾಗವೇಣಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಜಯಪುರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ.