ನವದೆಹಲಿ : ದೇಶದಾದ್ಯಂತ ಕೊರೊನಾ ಲಸಿಕೆ ಅಭಿಯಾನ ನಡೆಯುತ್ತಿದೆ. ಅದ್ರಲ್ಲೂ ಲಸಿಕೆಯನ್ನು ಆಸ್ಪತ್ರೆಗಳಲ್ಲಿ ಮಾತ್ರವೇ ಪಡೆಯಬೇಕಾಗಿದೆ. ಆರೋಗ್ಯ ಇಲಾಖೆಯ ಸಿಬ್ಬಂದಿ ಮನೆ ಮನೆಗೆ ತೆರಳಿ ಕೊರೊನಾ ಲಸಿಕೆ ನೀಡುವ ಕುರಿತು ಸಾಕಷ್ಟು ಚರ್ಚೆ ನಡೆಯುತ್ತಿದ್ದು, ಇದೀಗ ಕೇಂದ್ರ ಸರಕಾರ ಇನ್ಮುಂದೆ ಮನೆಯಲ್ಲಿಯೇ ಕೊರೊನಾ ಲಸಿಕೆ ಪಡೆಯಲು ಗ್ರೀನ್ ಸಿಗ್ನಲ್ ಕೊಟ್ಟಿದೆ.
ಆರೋಗ್ಯ ಸಮಸ್ಯೆ ಹೊಂದಿರುವವರು, ವೃದ್ದರಿಗೆ ಆಸ್ಪತ್ರೆಗೆ ತೆರಳಿ, ಗಂಟೆ ಗಟ್ಟಲೆ ಸರತಿ ಸಾಲಿನಲ್ಲಿ ನಿಂತು ಲಸಿಕೆ ಪಡೆಯೋದು ಕಷ್ಟ ಸಾಧ್ಯ. ಇದೇ ಕಾರಣಕ್ಕೆ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗಳು ನಡೆದಿತ್ತು. ಆದರೆ ನ್ಯಾಯಾಲಯ ಕೂಡ ಪ್ರಸಕ್ತ ಸ್ಥಿತಿಯಲ್ಲಿ ಮನೆ ಮನೆಗೆ ತೆರಳಿ ಲಸಿಕೆ ನೀಡುವುದು ಕಷ್ಟಸಾಧ್ಯ ಎಂದು ಹೇಳಿತ್ತು. ಆದ್ರೀಗ ಕೇಂದ್ರ ಸರಕಾರ ಕೊನೆಗೂ ಜನರ ಬೇಡಿಕೆಗೆ ಸ್ಪಂದಿಸಿದೆ. ಹಾಗಂತ ಎಲ್ಲರೂ ಮನೆಯಲ್ಲಿಯೇ ಲಸಿಕೆ ಪಡೆಯಲು ಸಾಧ್ಯವಿಲ್ಲ.
ಇದನ್ನೂ ಓದಿ: 14 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢ ! ಶುರುವಾಯ್ತಾ ಕೊರೊನಾ ಮೂರನೇ ಅಲೆ …!
ಮನೆಗೆ ತೆರಳಿ ಲಸಿಕೆ ನೀಡುವ ಕುರಿತು ಕೇಂದ್ರ ಸರಕಾರ ನಿಯಮವೊಂದನ್ನು ಜಾರಿಗೆ ತಂದಿದೆ. ತೀವ್ರ ಅನಾರೋಗ್ಯ ಸಮಸ್ಯೆ, ವಿಶೇಷ ಅಂಗವೈಕಲ್ಯ ಹಾಗೂ ವಿಶೇಷ ಅಗತ್ಯಗಳನ್ನು ಹೊಂದಿರುವವರು ಮಾತ್ರವೇ ಮನೆಯಲ್ಲಿಯೇ ಲಸಿಕೆಯನ್ನು ಪಡೆಯಬಹುದಾಗಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.
ಇದನ್ನೂ ಓದಿ: ಭಾರತಕ್ಕೆ ಕೊನೆಗೂ ಮಣಿದ ಯುಕೆ : ಕೋವಿಶೀಲ್ಡ್ ಲಸಿಕೆ ಪಡೆದವರಿಗೆ ಗ್ರೀನ್ ಸಿಗ್ನಲ್
ಕೇಂದ್ರ ನೀತಿ ಆಯೋಗದ ಸದಸ್ಯ (ಆರೋಗ್ಯ) ಡಾ. ವಿ.ಕೆ. ಪಾಲ್, ಅವರು ಈ ಕುರಿತು ಮಾಹಿತಿಯನ್ನು ನೀಡಿದ್ದಾರೆ. ನಿರ್ಬಂಧಿತ ಚಲನಶೀಲತೆ, ವಿಶೇಷ ಅಗತ್ಯಗಳನ್ನು ಹೊಂದಿರುವ ಜನರಿಗೆ ಮನೆಯಲ್ಲಿ ಲಸಿಕೆ ನೀಡಲಾಗುವುದು. ಇದಕ್ಕಾಗಿ ಎಲ್ಲಿಯೂ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ ಎಂದಿದ್ದಾರೆ.
(Covid Vaccine Available At Home)