ಬೆಂಗಳೂರು : ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ 1ರಿಂದ 6ನೇ ತರಗತಿ ವರೆಗಿನ ಮಕ್ಕಳಿಗೆ ನಾಳೆಯಿಂದಲೇ (ಮಾರ್ಚ್ 13) ಬೇಸಿಗೆ ರಜೆ ಆರಂಭಗೊಳ್ಳಲಿದೆ ಎಂದು ಪ್ರೌಢ ಹಾಗೂ ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚುತ್ತಿರೋ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ದಿಟ್ಟ ಕ್ರಮವನ್ನು ಕೈಗೊಂಡಿದೆ. 1 ರಿಂದ 6ನೇ ತರಗತಿವರೆಗಿನ ಮಕ್ಕಳಿಗೆ ನಾಳೆಯಿಂದಲೇ ಬೇಸಿಗೆ ರಜೆ ಆರಂಭಗೊಳ್ಳಲಿದೆ.

ಅಲ್ಲದೇ ವಿದ್ಯಾರ್ಥಿಗಳಿಗೆ ಯಾವುದೇ ಪರೀಕ್ಷೆಯಿರುವುದಿಲ್ಲ. ಇನ್ನು 7 ರಿಂದ 9ನೇ ತರಗತಿ ವರೆಗಿನ ಮಕ್ಕಳಿಗೆ ಸ್ಟಡಿ ರಜೆ ಘೋಷಣೆ ಮಾಡಲಾಗಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಶಾಲೆಗಳಿಗೆ ಮಾತ್ರ ಅನ್ವಯಿಸಲಿದೆ. ಜೂನ್ 1 ರಿಂದ ಶಾಲೆಗಳು ಪುನರಾರಂಭಗೊಳ್ಳಲಿದೆ.