ಸೋಮವಾರ, ಏಪ್ರಿಲ್ 28, 2025
HomeNationalIndian Army : ಕಾಶ್ಮೀರದಲ್ಲಿ ಇಬ್ಬರು ಉಗ್ರರ ಎನ್ ಕೌಂಟರ್

Indian Army : ಕಾಶ್ಮೀರದಲ್ಲಿ ಇಬ್ಬರು ಉಗ್ರರ ಎನ್ ಕೌಂಟರ್

- Advertisement -

ಕಾಶ್ಮೀರ : ಜಮ್ಮು ಮತ್ತು ಕಾಶ್ಮೀರದಲ್ಲಿ ದಿನದಿಂದ ದಿನಕ್ಕೆ ಉಗ್ರರ ಅಟ್ಟಹಾಸ ಹೆಚ್ಚುತಿದೆ. ಆದರೆ ಇಂದು ಜಮ್ಮು – ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಇಂದು ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಎಲ್ ಇಟಿ ಭಯೋತ್ಪಾದಕರು ಹತರಾಗಿದ್ದಾರೆ ಹಾಗೂ ಮೂವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಗುಪ್ತಚರ ಮಾಹಿತಿ ನೀಡಿದ್ದು. ಭಯೋತ್ಪಾದಕರು ಇರುವ ಬಗ್ಗೆ ಮಾಹಿತಿ ಪಡೆದ ನಂತರ ಭದ್ರತಾ ಪಡೆಗಳು ಶೋಪಿಯಾನ್ ಜಿಲ್ಲೆಯ ಡ್ರಾಗಡ್ ಪ್ರದೇಶದಲ್ಲಿ ಜಿಲ್ಲೆಯಲ್ಲಿ ಪೊಲೀಸ್ ಮತ್ತು ಭದ್ರತಾ ಪಡೆಗಳ (security force) ಜಂಟಿ ತಂಡದೊಂದಿಗೆ ಸುತ್ತುವರಿದು ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.

ಇದನ್ನೂ ಓದಿ: Kushinagar Airport : ಕುಶಿನಗರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ಈ ವೇಳೆ ಭಯೋತ್ಪಾದಕರು ಪೊಲೀಸ್ ಮತ್ತು ಭದ್ರತಾ ಪಡೆಗಳ ಜಂಟಿ ತಂಡದ ಮೇಲೆ ಏಕಾಏಕಿ ಗುಂಡು ಹಾರಿಸಿದ್ದಾರೆ. ನಂತರ ಶೋಧ ಕಾರ್ಯಾಚರಣೆ ಎನ್ ಕೌಂಟರ್ ಆಗಿ ಮಾರ್ಪಟ್ಟಿತು. ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರನ್ನು ಪೊಲೀಸ್ ಮತ್ತು ಭದ್ರತಾ ಪಡೆಗಳ ಜಂಟಿ ತಂಡ ಹತ್ಯೆ ಮಾಡಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಹತ್ಯೆಗೀಡಾದ ಭಯೋತ್ಪಾದಕರಲ್ಲಿ ಒಬ್ಬನನ್ನು ಆದಿಲ್ ವಾನಿ ಎಂದು ಗುರುತಿಸಲಾಗಿದೆ, ಅವನು ಜುಲೈ 2020ರಿಂದ ಸಕ್ರಿಯನಾಗಿದ್ದನು ಮತ್ತು ಪುಲ್ವಾಮಾದ ಲಿಟರ್ ನಲ್ಲಿ ಬಡ ಕಾರ್ಮಿಕನ ಹತ್ಯೆಯಲ್ಲಿ ಭಾಗಿಯಾಗಿದ್ದನು. ಹತ್ಯೆಗೀಡಾದ ಇತರ ಭಯೋತ್ಪಾದಕನ ಗುರುತು ಮತ್ತು ಗುಂಪು ಸಂಬಂಧ ಇನ್ನೂ ಪತ್ತೆಯಾಗಿಲ್ಲ ಈ ನಿಟ್ಟಿನಲ್ಲಿ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Uttharakhand : ಉತ್ತರಾಖಂಡದಲ್ಲಿ ದಿಢೀರ್ ಮೇಘಸ್ಪೋಟ : 17 ಜನ ಸಾವು, ಹಲವರು ನಾಪತ್ತೆ

ಕಳೆದ ವಾರ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಪಾಂಪೋರ್ ಪ್ರದೇಶದಲ್ಲಿ ಇದೇ ರೀತಿಯ ಎನ್ ಕೌಂಟರ್ ಸಂದರ್ಭದಲ್ಲಿ ಜಂಟಿ ಭದ್ರತಾ ಪಡೆಗಳು ಲಷ್ಕರ್-ಎ-ತೊಯ್ಬಾ ಕಮಾಂಡರ್ ಉಮರ್ ಮುಷ್ತಾಕ್ ಖಂಡೇ ಅವರನ್ನು ಬಲೆಗೆ ಬೀಳಿಸಿವೆ.

(Two militants encounter in Kashmir)

RELATED ARTICLES

Most Popular