ಕೊಡಗು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಕಡಿಮೆಯಾದ ಬೆನ್ನಲ್ಲೇ ಶಾಲೆಗಳ ಬಾಗಿಲು ತೆರೆಯಲಾಗಿದೆ. ಶೈಕ್ಷಣಿಕ ಚಟುವಟಿಕೆಗಳು ಸಂಪೂರ್ಣವಾಗಿ ಆರಂಭಗೊಂಡಿದೆ. ಶಾಲಾರಂಭದ ಬೆನ್ನಲ್ಲೇ ಕೊರೊನಾ ಹೆಮ್ಮಾರಿ ರಾಜ್ಯಕ್ಕೆ ಬಿಗ್ ಶಾಕ್ ಕೊಟ್ಟಿದೆ. ಒಂದೇ ಶಾಲೆಯ 21 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಶಾಲೆಯನ್ನು ಸೀಲ್ಡೌನ್ ಮಾಡಲಾಗಿದೆ.
ಕೊಡಗು ಜಿಲ್ಲೆಯ ಮಡಿಕೇರಿ ಹೊರವಲಯದಲ್ಲಿರುವ ನವೋದಯ ಶಾಲೆಯ 21 ಮಂದಿ ವಿದ್ಯಾರ್ಥಿಗಳಿಗೆ ಇದೀಗ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಕೊರೊನಾ ಸೋಂಕಿತ ವಿದ್ಯಾರ್ಥಿಗಳ ಪೈಕಿ 18 ವಿದ್ಯಾರ್ಥಿಗಳನು ಮಡಿಕೇರಿಯ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ರೆ ಉಳಿದ ಮೂವರು ವಿದ್ಯಾರ್ಥಿಗಳನ್ನು ಮನೆಯಲ್ಲಿಯೇ ಐಸೋಲೇಷನ್ಗೆ ಒಳಪಡಿಸಲಾಗಿದೆ.
ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಶಾಲೆಯಲ್ಲಿ ಕೋವಿಡ್ ತಪಾಸಣೆಯನ್ನು ನಡೆಸಲಾಗಿತ್ತು. ಈ ವೇಳೆಯಲ್ಲಿ ಶಾಲೆಯಲ್ಲಿರುವ 239ವಿದ್ಯಾರ್ಥಿಗಳ ಪೈಕಿ 21 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಹೀಗಾಗಿ ಸೋಂಕಿತ ವಿದ್ಯಾರ್ಥಿಗಳನ್ನು ಐಸೋಲೇಷನ್ಗೆ ಒಳಪಡಿಸಲಾಗಿದ್ದರೆ, ಸಂಪರ್ಕಿತ ವಿದ್ಯಾರ್ಥಿಗಳನ್ನು ಪ್ರತ್ಯೇಕಿಸಲಾಗಿದೆ.
ನವೋದಯ ಶಾಲೆಯಲ್ಲಿ ಒಟ್ಟು 40 ಮಂದಿ ಶಿಕ್ಷಕರು ಹಾಗೂ ಸಿಬ್ಬಂದಿಗಳಿದ್ದು, ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಉಳಿದವರನ್ನೂ ಕೂಡ ಕೊರೊನಾ ತಪಾಸಣೆಗೆ ಒಳಪಡಿಸಲು ಆರೋಗ್ಯ ಇಲಾಖೆ ಮುಂದಾಗಿದೆ. ಕೊರೊನಾ ಸೋಂಕಿಗೆ ಒಳಗಾಗಿರುವ ವಿದ್ಯಾರ್ಥಿಗಳು ಆರೋಗ್ಯವಾಗಿದ್ದಾರೆ. ಹೀಗಾಗಿ ಯಾರೂ ಕೂಡ ಆತಂಕಕ್ಕೆ ಒಳಗಾಗುವುದು ಬೇಡ ಎಂದು ಕೊಡಗು ಜಿಲ್ಲಾ ಆರೋಗ್ಯಾಧಿಕಾರಿ ಡಾ.ವೆಂಕಟೇಶ್ ಅವರು ತಿಳಿಸಿದ್ದಾರೆ.
ಕೊರೊನಾ ವೈರಸ್ ಸೋಂಕಿನ ಪ್ರಮಾಣ ಇಳಿಕೆಯಾದ ಬೆನ್ನಲ್ಲೇ ಶಾಲೆಗಳನ್ನು ಪೂರ್ಣ ಪ್ರಮಾಣದಲ್ಲಿ ಆರಂಭಿಸಲಾಗಿದೆ. ಇದೀಗ ವಿದ್ಯಾರ್ಥಿಗಳು ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಇನ್ನೊಂದಡೆಯಲ್ಲಿ ಕೊರೊನಾ ರೂಪಾಂತರಿ ವೈರಸ್ ಸೋಂಕು ದೃಢಪಟ್ಟಿರುವ ಬೆನ್ನಲ್ಲೇ ರಾಜ್ಯದಲ್ಲಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ರಾಜ್ಯ ಸರಕಾರ ಸೂಚನೆಯನ್ನು ನೀಡಿದೆ.
ಇದನ್ನೂ ಓದಿ : ರಾಜ್ಯ ಸರಕಾರಿ ನೌಕರರಿಗೆ ದೀಪಾವಳಿ ಗಿಫ್ಟ್ : ತುಟ್ಟಿಭತ್ಯೆ ಹೆಚ್ಚಿಸಿ ರಾಜ್ಯ ಸರಕಾರದ ಆದೇಶ
ಇದನ್ನೂ ಓದಿ : ಚಿಕ್ಕ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ : ಯಾವಾಗಿಂದ ಜಾರಿಯಾಗುತ್ತೆ ಗೊತ್ತಾ ಹೊಸ ನಿಯಮ
(Coronavirus infection of 21 students of Madikeri Jawahar Navodaya Vidyalaya )