ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಮತ್ತೋರ್ವನಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಹೀಗಾಗಿ ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.

ಕಲಬುರಗಿಯಲ್ಲಿ ವೃದ್ದನೋರ್ವ ಮೃತಪಟ್ಟಿರೋ ಬೆನ್ನಲ್ಲೇ ನಾಲ್ವರು ಶಂಕಿತರ ಥ್ರೋಟ್ ಸ್ಯಾಂಪಲ್ ಹಾಗೂ ರಕ್ತದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಈ ಪೈಕಿ ಮೂರು ಮಂದಿ ಶಂಕಿತರ ಆರೋಗ್ಯ ವರದಿ ನೆಗೆಟಿವ್ ಬಂದಿತ್ತು. ಆದ್ರೀಗ 4ನೇ ವ್ಯಕ್ತಿಯ ವರದಿ ಪಾಸಿಟಿವ್ ಅಂತಾ ಬಂದಿದೆ ಎಂದು ಕಲಬುರಗಿ ಜಿಲ್ಲಾಧಿಕಾರಿಗ ಶರತ್ ಬಿ. ತಿಳಿಸಿದ್ದಾರೆ.

ಇದೀಗ ಕೊರೊನಾ ಸೋಂಕು ದೃಢಪಟ್ಟಿರೋ ವ್ಯಕ್ತಿ ಕೂಡ ಮೃತಪಟ್ಟಿರೋ ವ್ಯಕ್ತಿಯ ಸಂಬಂಧಿಕರು ಎಂದು ತಿಳಿದುಬಂದಿದೆ. ಈ ಕುರಿತು ಶ್ರೀರಾಮುಲು ಟ್ವೀಟ್ ಮಾಡಿದ್ದು, ಜನರು ಯಾವುದೇ ಕಾರಣಕ್ಕೂ ಭಯ ಪಡುವ ಅಗತ್ಯವಿಲ್ಲ. ಕೋವಿಡ್ -19 ಸೋಂಕಿತರು ಆದಷ್ಟು ಬೇಗ ಗುಣಮುಖರಾಗುತ್ತಾರೆಂಬ ವಿಶ್ವಾಸವಿದೆ ಎಂದಿದ್ದಾರೆ.