ಭಾನುವಾರ, ಏಪ್ರಿಲ್ 27, 2025
Homeagricultureರೈತರ ಮಕ್ಕಳ ಉನ್ನತ ಶಿಕ್ಷಣ ಪ್ರೋತ್ಸಾಹಕ್ಕೆ ಹೊಸ ಶಿಷ್ಯ ವೇತನ : ರಾಜ್ಯ ಸರ್ಕಾರದ ಆದೇಶ

ರೈತರ ಮಕ್ಕಳ ಉನ್ನತ ಶಿಕ್ಷಣ ಪ್ರೋತ್ಸಾಹಕ್ಕೆ ಹೊಸ ಶಿಷ್ಯ ವೇತನ : ರಾಜ್ಯ ಸರ್ಕಾರದ ಆದೇಶ

- Advertisement -

ಬೆಂಗಳೂರು : ರೈತರ ಮಕ್ಕಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯನ್ನು ನೀಡಿದೆ. ರಾಜ್ಯ ಸರ್ಕಾರವು ರೈತರ ಮಕ್ಕಳ ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಹೊಸ ಶಿಷ್ಯ ವೇತನವನ್ನು ಜಾರಿಗೆ ತಂದಿದೆ. ವಿದ್ಯಾರ್ಥಿಗಳು ಆನ್‌ ಲೈನ್‌ ಅರ್ಜಿ ಸಲ್ಲಿಸಲು ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಸರ್ಕಾರದ ಮುಖ್ಯ ಕಾರ್ಯದರ್ಶಿ ಜಿ ಕುಮಾರ್‌ ನಾಯಕ್‌ ಆದೇಶ ಹೊರಡಿಸಿದ್ದು. 10 ನೇ ತರಗತಿ ಪೂರ್ಣಗೊಳಿಸಿದ ನಂತರ ರಾಜ್ಯದ ಶಿಕ್ಷಣ ಸಂಸ್ಥೆಗಳು ಅಥವಾ ವಿಶ್ವವಿದ್ಯಾಲಯಗಳು ಸ್ವಾಯತ್ತ ಕಾಲೇಜುಗಳು, ಪದವಿ ಮತ್ತು ಸ್ನಾತಕೋತ್ತರ ಕೋರ್ಸ್‌ ಪ್ರವೇಶವನ್ನು ಪಡೆದಿರುವ ಕರ್ನಾಟಕ ರಾಜ್ಯ ರೈತರ ಮಕ್ಕಳ ಬ್ಯಾಂಕ್‌ ಖಾತೆಗೆ ನೇರ ಹಣ ಮಾಡಲಾಗುತ್ತದೆ.

ಇದನ್ನೂ ಓದಿ: Good News : ಕರ್ನಾಟಕದ ಜನತೆಗೆ ಗುಡ್‌ ನ್ಯೂಸ್‌ ನೀಡಿದ ರಾಜ್ಯ ಸರ್ಕಾರ : ಪೆಟ್ರೋಲ್‌, ಡಿಸೇಲ್‌ ಬೆಲೆ ಇಳಿಕೆ

ಕರ್ನಾಟಕ ರಾಜ್ಯ ರೈತರ ಮಕ್ಕಳ ಬ್ಯಾಂಕ್‌ ಖಾತೆಗೆ ನೇರ ಹಣವನ್ನು ವರ್ಗಾವಣೆ ಪದ್ಧತಿಯನ್ನು 2021-2022 ನೇ ಸಾಲಿನಿಂದ ಜಾರಿಗೆ ತರಲಾಗುತ್ತದೆ. ಶಿಷ್ಯವೇತನದ ಹಣದ ಮೊತ್ತವನ್ನು ಶಿಷ್ಯವೇತನ ರೂಪದಲ್ಲಿ ನೀಡಲು ಕರ್ನಾಟಕ ಸರ್ಕಾರ ಅನುಮೋದನೆ ನೀಡಿದೆ ಎಂದು ಆದೇಶ ಹೊರಡಿಸಿದೆ.

ರೈತರ ಮಕ್ಕಳು ಶಿಷ್ಯ ವೇತನ ಪಡೆಯಲು https://ssp.postmatric.karnataka.gov.in ಪೋರ್ಟಲ್ ಮುಖಾಂತರ ಆನ್ ಲೈನ್ ಅರ್ಜಿ ಸಲ್ಲಿಸಬಹುದಾಗಿದೆ. ಇದರ ಕುರಿತು ಕಾಲೇಜು/ವಿವಿ/ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಈ ಕೆಳಗಿನ ಸೂಚನೆ ನೀಡಿದೆ.

ಇದನ್ನೂ ಓದಿ: Fuel Price : ದೀಪಾವಳಿಗೆ ಬೊಮ್ಮಾಯಿ ಗಿಫ್ಟ್‌ : ಪೆಟ್ರೋಲ್‌, ಡಿಸೇಲ್‌ ಬೆಲೆಯಲ್ಲಿ 7 ರೂ. ಇಳಿಸಿದ ರಾಜ್ಯ : ಕರ್ನಾಟಕದಲ್ಲಿ ಎಷ್ಟಾಗುತ್ತೆ ಗೊತ್ತಾ ತೈಲ ಬೆಲೆ

1) ರೈತ ಮಕ್ಕಳ ತಂದೆ ತಾಯಿ ಇಬ್ಬರು ಕೃಷಿ ಜಮೀನಿನ ಒಡೆಯರಾಗಿರ ಬೇಕು. ಈ ಯೋಜನೆಯಲ್ಲಿ ಒಂದು ಶಿಷ್ಯ ವೇತನಕ್ಕೆ ಮಾತ್ರ ರೈತರ ಮಕ್ಕಳು ಅರ್ಹರಾಗಿರುತ್ತಾರೆ.
2)ರೈತರ ಮಕ್ಕಳು ರಾಜ್ಯದ ಅನುದಾನದಿಂದ ಪಾವತಿಸುವಂತಹ ಒಂದು ಶಿಷ್ಯ ವೇತನಕ್ಕೆ ಮಾತ್ರ ಅರ್ಹರಾಗಿರುತ್ತಾರೆ.
3) ಈ ಶಿಷ್ಯ ವೇತನವು ಯಾವುದೇ ಕೋರ್ಸ್ ನ ನೆಮಿಸ್ಟರ್ ನಲ್ಲಿ ಶೈಕ್ಷಣಿಕ ವರ್ಷದಲ್ಲಿ ಅನುತ್ತೀರ್ಣ ಹೊಂದಿ ಪುನಃ ಆ ಸೆಮಿಸ್ಟರ್ ಶೈಕ್ಷಣಿಕ ವರ್ಷದಲ್ಲಿ ವಿದ್ಯಾಭ್ಯಾಸ ಪುನಾರಾವರ್ತನೆಯಾದರೆ ( ಪುನಃ ಪರೀಕ್ಷೆ ತೆಗೆದುಕೊಂಡರೆ ) ಆ ವಿದ್ಯಾರ್ಥಿಗಳು ಶಿಷ್ಯ ವೇತನ ಪಡೆಯಲು ಅರ್ಹರಾಗಿರುವುದಿಲ್ಲ.

(New disciple pay to encourage higher education of farmers’ children: State Government orders)

RELATED ARTICLES

Most Popular