ಬೆಂಗಳೂರು : ರಾಜ್ಯ ರಾಜಧಾನಿ ಸೇರಿದಂತೆ ರಾಜ್ಯದ ಹಲವೆಡೆ ಹೆಚ್ಚಿನ ಮಳೆಯಾಗುತ್ತಿದ್ದು ರಾಜ್ಯದಲ್ಲಿ ಆತಂಕದ ವಾತವರಣ ಶುರುವಾಗಿದೆ. ಕರ್ನಾಟದ ಕರಾವಳಿ ಸೇರಿದಂತೆ ಕೇರಳ ಮತ್ತು ಲಕ್ಷದ್ವೀಪಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು ಕರಾವಳಿ ಹಾಗೂ ಮಲೆನಾಡಿನಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇಂದಿನಿಂದ ನವೆಂಬರ್ 6 ರ ವರೆಗೆ ಕರ್ನಾಟಕದ ಸುಮಾರು 11 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು, ಹಾಸನ, ಗದಗ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ :ರೈತರ ಮಕ್ಕಳ ಉನ್ನತ ಶಿಕ್ಷಣ ಪ್ರೋತ್ಸಾಹಕ್ಕೆ ಹೊಸ ಶಿಷ್ಯ ವೇತನ : ರಾಜ್ಯ ಸರ್ಕಾರದ ಆದೇಶ
ಬೆಂಗಳೂರಿನಲ್ಲಿ ನಿನ್ನೆ ಸುರಿದ ಭಾರಿ ಮಳೆಯಿಂದ ಹಲವು ರಸ್ತೆಗಳಲ್ಲಿ ನೀರು ತುಂಬಿ ಕೆರೆಗಳಂತೆ ಕಾಣಿಸುತ್ತಿದೆ. ಇಂದು ಮತ್ತು ನಾಳೆ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಇಂದಿನಿಂದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಚಿಕ್ಕಮಗಳೂರು, ಶೃಂಗೇರಿ, ತೀರ್ಥಹಳ್ಳಿ, ಪುತ್ತೂರು, ಧರ್ಮಸ್ಥಳ ಮುಂತಾದ ಸ್ಥಳಗಳಲ್ಲಿ ಮಳೆ ಹೆಚ್ಚಾಗಿ ಆಗಲಿದೆ.
ಕರಾವಳಿ ಪ್ರದೇಶದಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದ್ದು ಕರಾವಳಿ ಹಾಗೂ ಮಲೆನಾಡಿನಲ್ಲಿ ಎಲ್ಲೋ ಅಲರ್ಟ್ ಗೋಷಿಸಲಾಗಿದೆ. ಕರ್ನಾಟಕ, ಲಕ್ಷದ್ವೀಪ, ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲೂ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಭಾರತದ ರಾಜ್ಯಗಳಲ್ಲಿ ಇಂದು ಮತ್ತು ನಾಳೆ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
(Heavy rains in Karnataka, Kerala and Lakshadweep today)