ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್‌ನಲ್ಲಿ (Karnataka legislative council election ) ಖಾಲಿಯಾಗಲಿರುವ 25 ಸ್ಥಾನಗಳಿಗೆ ಚುನಾವಣಾ ದಿನಾಂಕ ಪ್ರಕಟವಾಗಿದೆ. ಚುನಾವಣಾ ಆಯೋಗ ಡಿಸೆಂಬರ್ 10 ರಂದು ಚುನಾವಣಾ ದಿನಾಂಕ ಘೋಷಿಸಿದೆ.
ಸ್ಥಳೀಯ ಸಂಸ್ಥೆಗಳಿಂದ ಕರ್ನಾಟಕ ವಿಧಾನ ಪರಿಷತ್‌ಗೆ ಆಯ್ಕೆಯಾಗಿದ್ದ 25 ವಿಧಾನ ಪರಿಷತ್ ಸದಸ್ಯರ ಅವಧಿ ಇದೇ ಜನವರಿ ತಿಂಗಳಲ್ಲಿ ಅಂತ್ಯವಾಗಲಿದೆ ಈ ಹಿನ್ನೆಲೆಯಲ್ಲಿ ಚುನಾವಣೆ ನಡೆಸಲು ಚುನಾವಣಾ ಆಯೋಗ ಮುಂದಾಗಿದೆ. ಡಿಸೆಂಬರ್ ೧೦ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 14ರಂದು ಫಲಿತಾಂಶ ಹೊರ ಬೀಳಲಿದೆ.
ಇದನ್ನೂ ಓದಿ : Hanagal ಸೋಲಿಗೆ ಬಿಜೆಪಿ ಆತ್ಮಾವಲೋಕ : ಬಿಜೆಪಿ ಕೋರ್ ಕಮಿಟಿ ಸಭೆ
ಇದನ್ನೂ ಓದಿ : ಕರ್ನಾಟಕದಲ್ಲಿ ಬದಲಾಗುತ್ತಾ ಬಿಜೆಪಿ ನಾಯಕತ್ವ: ಉಸ್ತುವಾರಿ ಅರುಣ್ ಸಿಂಗ್ ಏನಂದ್ರು ಗೊತ್ತಾ?
ಡಿಸೆಂಬರ್ 10 ರಂದು ಬೆಳಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆ ಮತದಾನ ನಡೆಯಲಿದೆ. ರಾಜ್ಯದಲ್ಲಿ 25 ಸ್ಥಾನಗಳಿಗೆ ನಡೆಯಲಿರುವ ಚುನಾವಣೆ ಮೂರು ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿದೆ. ಆಡಳಿತರೂಢ ಬಿಜೆಪಿ ವಿಧಾನ ಪರಿಷತ್‌ನಲ್ಲಿ ಹಿಡಿತ ಸಾಧಿಸುವ ನಿಟ್ಟಿನಲ್ಲಿ ಈಗಾಗಲೇ ಸಿದ್ದತೆಯನ್ನು ಆರಂಭಿಸಿದೆ. ಈ ನಡುವಲ್ಲೇ ಇಂದು ಚುನಾವಣಾ ದಿನಾಂಕ ಘೋಷಣೆಯಾಗಿದೆ.
( Karnataka legislative council election Date Declare )