ನವದೆಹಲಿ : ಕರ್ನಾಟಕದಲ್ಲಿ ಬಿಟ್ ಕಾಯಿನ್ ಬಿರುಗಾಳಿಯನ್ನೇ ಬೀಸುತ್ತಿದೆ. ಬಿಟ್ ಕಾಯಿನ್ ದಂಧೆ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಕುರ್ಚಿಗೆ ಕುತ್ತು ತರುತ್ತೆ ಅನ್ನೋ ಆರೋಪ ಕಾಂಗ್ರೆಸ್ ವಲಯದಲ್ಲಿ ಕೇಳಿಬರುತ್ತಿದೆ. ಈ ನಡುವಲ್ಲೇ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ದೆಹಲಿಗೆ ಭೇಟಿ ನೀಡಿದ್ದಾರೆ. ಇಂದು ಸಿಎಂ ಬೊಮ್ಮಾಯಿ ( CM Bommai ) ಅವರು ಪಿಎಂ ನರೇಂದ್ರ ಮೋದಿ (PM Modi) ಅವರನ್ನು ಭೇಟಿ ಮಾಡಲಿದ್ದಾರೆ. ಈ ಭೇಟಿ ಇದೀಗ ಕುತೂಹಲ ಮೂಡಿಸಿದೆ.
ನಿನ್ನೆಯೇ ದೆಹಲಿಗೆ ಭೇಟಿ ನೀಡಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಜೊತೆಗೆ ಚರ್ಚೆಯನ್ನು ನಡೆಸಿದ್ದಾರೆ. ಇದೇ ವೇಳೆಯಲ್ಲಿ ರಾಜ್ಯದಲ್ಲಿ ಕೇಳಿಬರುತ್ತಿರುವ ಬಿಟ್ ಕಾಯಿನ್ ಪ್ರಕರಣದ ಕುರಿತು ಮಾಹಿತಿಯನ್ನು ಕೇಳಿದ್ದಾರೆ ಎನ್ನಲಾಗುತ್ತಿದೆ. ಇನ್ನೊಂದೆಡೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ. ಈ ವೇಳೆಯಲ್ಲಿ ಬಿಟ್ ಕಾಯಿನ್ ಪ್ರಕರಣದ ಕುರಿತು ಪ್ರಧಾನಿ ಮೋದಿ ಅವರು ಮಾಹಿತಿಯನ್ನು ಪಡೆಯುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಬಿಟ್ ಕಾಯಿನ್ ಪ್ರಕರಣದ ಆರೋಪಿ ಶ್ರೀಕಿ ವಿರುದ್ದ ಈಗಾಗಲೇ ಪ್ರಕರಣ ದಾಖಲಾಗಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಯುವ ನಾಯಕರುಗಳ ಹೆಸರು ಪ್ರಕರಣದಲ್ಲಿ ಕೇಳಿಬರುತ್ತಿದೆ. ಕಾಂಗ್ರೆಸ್ ಶಾಸಕ ಪ್ರಿಯಾಂಕ ಖರ್ಗೆ ಬಿಟ್ ಕಾಯಿನ್ ಪ್ರಕರಣ ಸಿಎಂ ಹುದ್ದೆಯನ್ನು ಬಲಿ ಪಡೆಯುತ್ತೆ ಅಂತಾ ಹೇಳಿಕೆಯನ್ನು ನೀಡಿದ್ದಾರೆ. ಇದರ ಬೆನ್ನಲ್ಲೇ ಇದೀಗ ಇತರ ಕಾಂಗ್ರೆಸ್ ನಾಯಕರು ಕೂಡ ಸಿಎಂ ಬೊಮ್ಮಾಯಿ ಅವರು ಹುದ್ದೆಯಿಂದ ಕೆಳಗೆ ಇಳಿಯವುದು ಖಚಿತ ಅನ್ನೋ ಹೇಳಿಕೆ ನೀಡುತ್ತಿದ್ದಾರೆ.

ಬೆಂಗಳೂರು ಪೊಲೀಸರು ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ಪ್ರಕರಣದ ತನಿಖೆಗೆ ಸಿಬಿಐ ಹಾಗೂ ಇಡಿ ಎಂಟ್ರಿಯಾಗುತ್ತಾ ಅನ್ನೋ ಕುತೂಹಲ ಮೂಡಿಸಿದೆ. ಪ್ರಧಾನಿ ಅವರಿಗೆ ಪ್ರಕರಣದ ಕುರಿತು ಸಿಎಂ ಮನವರಿಕೆಯನ್ನು ಮಾಡಿಕೊಟ್ಟು, ನಂತರದಲ್ಲಿ ಉನ್ನತ ಮಟ್ಟದ ತನಿಖೆಗೆ ಪ್ರಕರಣವನ್ನು ವಹಿಸುವ ಸಾಧ್ಯತೆಯೂ ಇದೆ ಎನ್ನಲಾಗುತ್ತಿದೆ.
ಇದನ್ನೂ ಓದಿ : ಬಿಟ್ ಕಾಯಿನ್ ಪ್ರಕರಣ ಸಿಎಂ ಬಲಿ ಪಡೆಯುತ್ತೆ : ಪ್ರಿಯಾಂಕ್ ಖರ್ಗೆ
ಇದನ್ನೂ ಓದಿ :ಬಿಟ್ ಕಾಯಿನ್ ಹಗರಣ : ಪ್ರಿಯಾಂಕ ಖರ್ಗೆ ಹೇಳಿಗೆಕೆ ಪ್ರತಿಕ್ರಿಯಿಸಲಾರೆ ಎಂದ ಸಿಎಂ ಬೊಮ್ಮಾಯಿ
(Karnataka CM Basavaraj Bommai and PM Narendra Modi Meet today, discuss Bitcoin Case)