ಬಾಬರಿ ಮಸೀದಿ ಧ್ವಂಸ ಘಟನೆ ನಡೆದು ಇಂದಿನ ಬರೋಬ್ಬರಿ 29 ವರ್ಷಗಳು ಪೂರ್ಣಗೊಂಡಿವೆ. 1992ರ ಡಿಸೆಂಬರ್ 12ರಂದು ಲಕ್ಷಗಟ್ಟಲೇ ಹಿಂದೂ ಕರಸೇವಕರು ಬಾಬರಿ ಮಸೀದಿಯನ್ನು ಧ್ವಂಸ (babri masjid demolition) ಮಾಡುವ ಮೂಲಕ ಇದು ಶ್ರೀರಾಮ ಜನ್ಮ ಭೂಮಿ ಎಂದು ಪ್ರತಿಪಾದಿಸಿದ್ದರು. ಈ ಘಟನೆಯು ದೇಶದಲ್ಲಿ ದೊಡ್ಡ ಬಿರುಗಾಳಿಯನ್ನೇ ಎಬ್ಬಿಸಿದೆ. ಈ ಘಟನೆ ನಡೆದು 29 ವರ್ಷಗಳೇ ಕಳೆದರೂ ಸಹ ದ್ವೇಷ ಇನ್ನೂ ಆರಿದಂತೆ ಕಾಣುತ್ತಿಲ್ಲ. ಕೇರಳದಲ್ಲಿ ಇಂದು ಶಾಲಾ ಮಕ್ಕಳಿಗೆ ಒತ್ತಾಯಪೂರ್ವಕವಾಗಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ( PFI distributes ) ‘ನಾನು ಬಾಬರಿ’ ( I am Babri ಎಂಬ ಬ್ಯಾಡ್ಜ್ ಎಂಬ ಅಂಟಿಸಿರುವ ಆರೋಪ ಎದುರಾಗಿದೆ.
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರು ಶಾಲೆಗೆ ತೆರಳುತ್ತಿದ್ದ ಮಕ್ಕಳಿಗೆ ನಾನು ಬಾಬರಿ ಎಂಬ ಬ್ಯಾಡ್ಜ್ ಅಂಟಿಸಿದ್ದಾರೆ. ಈ ಸಂಬಂಧ ಕೇರಳ ಪೊಲೀಸರು ಪಿಎಫ್ಐ ಕಾರ್ಯಕರ್ತರ ವಿರುದ್ಧ ಸೆಕ್ಷನ್ 341, 154ಎ ಹಾಗೂ 38ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪತ್ತನಂತಿಟ್ಟ ಜಿಲ್ಲೆಯ ಸೇಂಟ್ ಜಾರ್ಜ್ ಪ್ರೌಢಶಾಲೆಯಲ್ಲಿ ನಡೆದ ಘಟನೆಯ ಸಂಬಂಧ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಪಿಕೆ ಕೃಷ್ಣದಾಸ್ ದೂರನ್ನು ನೀಡಿದ್ದಾರೆ.
ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ದೂರನ್ನು ಪತ್ರದ ಮುಖೇನ ಸಲ್ಲಿಸಲಾಗಿದೆ. ಮುನೀರ್ ಇಬ್ನು ನಜೀರ್ ನೇತೃತ್ವದಲ್ಲಿ ಕೇವಲ ಹಿಂದೂ ಹಾಗೂ ಕ್ರಿಶ್ಚಿಯನ್ ಸಮುದಾಯದ ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಲಾಗಿದೆ. 7 ವರ್ಷದೊಳಗಿನ ಮಕ್ಕಳಿಗೆ ಬಾಬರಿ ಬ್ಯಾಡ್ಜ್ ಧರಿಸುವಂತೆ ಒತ್ತಡ ಹೇರಿದ್ದಾರೆ. ಇದು ಮಕ್ಕಳ ಮೂಲಭೂತ ಹಕ್ಕುಗಳಿಗೆ ಭಂಗ ತಂದಂತಾಗಿದೆ. ಹೀಗಾಗಿ ಮಕ್ಕಳ ಹಕ್ಕುಗಳಿಗೆ ಚ್ಯುತಿ ತಂದ ಪಿಎಫ್ಐ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ.
ಇದನ್ನು ಓದಿ : RAMA BHAT URIMAJALU No More : ಬಿಜೆಪಿಯ ಭೀಷ್ಮ ಉರಿಮಜಲು ಕೆ.ರಾಮ ಭಟ್ ವಿಧಿವಶ
ಇದನ್ನು ಓದಿ : Girl Molested : ವಿದ್ಯುತ್ ಮೀಟರ್ ರೀಡಿಂಗ್‌ಗೆ ಮನೆಗೆ ಬಂದ : 12 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿದ ಕಾಮುಕ
PFI distributes ‘I am Babri’ badge in Kerala on Babri demolition anniversary; FIR registered and NCPCR alerted Babri Masjid Demolition