Punjab Police :ಜನವರಿ ಐದರಂದು ಪ್ರಧಾನಿ ನರೇಂದ್ರ ಮೋದಿ ಹುಸೇನಿವಾಲಾದಲ್ಲಿರುವ ರಾಷ್ಟ್ರೀಯ ಹುತಾತ್ಮರ ಸ್ಮಾರಕಕ್ಕೆ ಭೇಟಿ ನೀಡಲು ಹಾಗೂ ಪಂಜಾಬ್ನ ಫಿರೋಜ್ಪುರದಲ್ಲಿರುವ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲು ಪ್ರಧಾನಿ ನರೇಂದ್ರ ಮೋದಿ ತೆರಳುತ್ತಿದ್ದ ವೇಳೆಯಲ್ಲಿ ಅವರ ಬೆಂಗಾವಲು ಪಡೆ ವಾಹನವನ್ನು ಸುಮಾರು 20 ನಿಮಿಷಗಳ ಕಾಲ ಫ್ಲೈಓವರ್ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರು ತಡೆ ಹಿಡಿದಿದ್ದರು.
ಪಂಜಾಬ್ನಲ್ಲಿ ನಡೆದ ಈ ಭದ್ರತಾ ಉಲ್ಲಂಘನೆಯು ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಕಾಂಗ್ರೆಸ್ ನೇತೃತ್ವದ ಪಂಜಾಬ್ ಸರ್ಕಾರವು ಪ್ರಧಾನಿ ಮೋದಿಯನ್ನು ಅಪಾಯಕ್ಕೆ ಸಿಲುಕಿಸಿದೆ ಎಂದು ಬಿಜೆಪಿಯು ದೂಷಿಸಿದೆ. ಆದರೆ ಕಾಂಗ್ರೆಸ್ ಸರ್ಕಾರವು ಪ್ರಧಾನಿ ಭೇಟಿ ವೇಳೆಯಲ್ಲಿ ಅಗತ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು ಎಂದು ಸಮರ್ಥನೆ ನೀಡುತ್ತಲೇ ಬಂದಿದೆ.
ಈ ಘಟನೆಯು ಇದೀಗ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ನಿವೃತ್ತ ನ್ಯಾಯಮೂರ್ತಿ ಮಲ್ಹೋತ್ರಾ ನೇತೃತ್ವದಲ್ಲಿ ಪ್ರಕರಣದ ತನಿಖೆ ಕೂಡ ಆರಂಭವಾಗಿದೆ.
ಈ ಎಲ್ಲದರ ನಡುವೆ ಪಂಜಾಬ್ನಲ್ಲಿ ಅಂದು ನಿಜವಾಗಿಯೂ ಏನಾಗಿತ್ತು ಎಂಬ ಪ್ರಶ್ನೆ ದೇಶದ ನಾಗರಿಕರಲ್ಲಿ ಮನೆ ಮಾಡಿದೆ. ರಾಷ್ಟ್ರೀಯ ಮಾಧ್ಯಮವೊಂದು ನಡೆಸಿದ ರಹಸ್ಯ ಕಾರ್ಯಾಚರಣೆಯಲ್ಲಿ ಪಂಜಾಬ್ನಲ್ಲಿ ನಡೆದ ಭದ್ರತಾ ಲೋಪದ ಬಗ್ಗೆ ಕೆಲ ಸ್ಫೋಟಕ ಮಾಹಿತಿಗಳು ಲಭ್ಯವಾಗಿದೆ. ಪ್ರಧಾನಿ ಮೋದಿಯ ರ್ಯಾಲಿಗೆ ಬಿಜೆಪಿ ಕಾರ್ಯಕರ್ತರು ಬರುವುದನ್ನು ತಪ್ಪಿಸಲು ಜನದಟ್ಟಣೆ ಇರುವ ಸ್ಥಳಗಳಲ್ಲಿ ಪ್ರತಿಭಟನಾಕಾರರು ರಸ್ತೆ ನಡೆಸಲು ಪ್ಲಾನ್ ಮಾಡಿದ್ದರು. ಈ ಸಂಬಂಧ ಜನವರಿ 2ರಂದು ಹೆಚ್ಚುವರಿ ಡೈರೆಕ್ಟರ್ ಜನರಲ್ಗೆ ವರದಿಯನ್ನು ಸಲ್ಲಿಸಲಾಗಿದೆ ಎಂದು ಪೊಲೀಸರೊಬ್ಬರು ಮಾಹಿತಿ ನೀಡಿದ್ದಾರೆ.
ಜನವರಿ 2ನೇ ತಾರೀಖಿನ ವರದಿಯ ಬಳಿಕವು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಪ್ರತಿಭಟನಾಕಾರರ ಪ್ಲಾನ್ ಏನೆಲ್ಲ ಇತ್ತು ಎಂಬುದರ ಬಗ್ಗೆ ಕ್ಷಣ ಕ್ಷಣದ ಮಾಹಿತಿ ಲಭ್ಯವಾಗುತ್ತಲೇ ಇತ್ತು. ಪ್ರತಿಭಟನಾಕಾರರು ಧರಣಿಗೆ ಮುಂದಾಗಿದ್ದರು ಇದನ್ನು ಪೊಲೀಸರು ತಡೆಯಲು ಹೋದರೆ ಅವರು ರಸ್ತೆ ತಡೆ ಮಾಡುತ್ತಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ನಾವು ಮೊದಲೆ ಮಾಹಿತಿ ನೀಡಿದ್ದೆವು ಎಂದು ಹೇಳಿದ್ದಾರೆ.
Ahead of PM Modi’s visit, Punjab Police knew about protesting farmers but didn’t act | India Today investigation
ಇದನ್ನು ಓದಿ : Bangalore Lockdown : ಬೆಂಗಳೂರಿನಲ್ಲಿ ಕರೋನಾ ರೌದ್ರ ನರ್ತನ : ಸೋಂಕಿನ ಪ್ರಮಾಣ ನಿಯಂತ್ರಿಸಲು ಅನಿವಾರ್ಯವಾಗುತ್ತಾ ಲಾಕ್ ಡೌನ್ ?
ಇದನ್ನೂ ಓದಿ : Bombay High Court : ಕೊರೊನಾ ಲಸಿಕೆ ಪಡೆಯದವರಿಗೆ ತಾರತಮ್ಯ ಮಾಡುವಂತಿಲ್ಲ : ಬಾಂಬೆ ಹೈಕೋರ್ಟ್