ಉಡುಪಿ : ಕೊರೊನಾ ವಿರುದ್ದ ಉಡುಪಿ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ವಿದೇಶದಿಂದ ಬಂದವರನ್ನು ಕಡ್ಡಾಯವಾಗಿ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. ಕ್ವಾರಂಟೈನ್ ನಿಯಮ ಪಾಲನೆ ಮಾಡದವರ ಪಾಸ್ಪೋರ್ಟ್ ಗಳನ್ನೇ ಮುಟ್ಟುಗೋಲು ಹಾಕಿಕೊಳ್ಳುವುದಾಗಿ ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಎಚ್ಚರಿಕೆಯನ್ನು ನೀಡಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ 1500ಕ್ಕೂ ಅಧಿಕ ಮಂದಿಯನ್ನು ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. ಜಿಲ್ಲೆಯಲ್ಲಿ ಓರ್ವನಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಉಡುಡಪಿ ಜಿಲ್ಲೆಯಲ್ಲಿ ಕ್ವಾರಂಟೈನ್ ಕಡ್ಡಾಯವಾಗಿ ಪಾಲನೆ ಮಾಡಲಾಗುತ್ತಿದೆ.

ಕೊರಂಟೈನ್ ನಲ್ಲಿದ್ದವರು ಯಾರಾದ್ರೂ ಮನೆಯಿಂದ ಹೊರಬಂದ್ರೆ ಅಂತವರ ವಿರುದ್ದ ಕಠಿಣ ಕ್ರಮಕೈಗೊಳ್ಳಲಾಗುತ್ತಿದೆ. ಕೊರಂಟೈನ್ ನಿಯಮ ಪಾಲನೆ ಮಾಡದವರ ಪಾಸ್ ಪೋರ್ಟ್ ಮುಟ್ಟು ಹಾಕಿಕೊಳ್ಳುವುದಾಗಿ ಜಿಲ್ಲಾಧಿಕಾರಿಗಳು ಕೊನೆಯ ಎಚ್ಚರಿಕೆಯನ್ನು ರವಾನಿಸಿದ್ದಾರೆ.