ಬೆಂಗಳೂರು : ಉಡುಪಿ ಜಿಲ್ಲೆಯಲ್ಲಿ ಆರಂಭವಾಗಿರುವ ಹಿಜಾಬ್ ವಿವಾದ ( Hijab Culture) ರಾಜ್ಯಮಟ್ಟದಲ್ಲಿ ಸುದ್ದಿ ಮಾಡುತ್ತಿದ್ದು ರಾಜಕೀಯ ಕೆಸರೆರಚಾಟಕ್ಕೆ ವೇದಿಕೆ ಕಲ್ಪಿಸಿದೆ. ಕಾಲೇಜುಗಳಲ್ಲಿ ಧರ್ಮದ ಆಚರಣೆ ಬೇಡ ಎನ್ನುವುದು ಸರ್ಕಾರದ ವಾದವಾಗಿದ್ದರೆ ಹಿಜಾಬ್ ಹೆಸರಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರನ್ನು ಶಿಕ್ಷಣ ವಂಚಿತರನ್ನಾಗಿ ಮಾಡಲಾಗುತ್ತಿದೆ ಎನ್ನವುದು ವಿರೋಧ ಪಕ್ಷದ ವಾದವಾಗಿದೆ.
ಇಂದು ಬೆಂಗಳೂರಿನಲ್ಲಿ ಇದೇ ವಿಚಾರವಾಗಿ ಮಾತನಾಡಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಿಜಾಬ್ ಹೆಸರಿನಲ್ಲಿ ಮತಾಂಧ ಶಕ್ತಿಗಳು ಆಟವಾಡುತ್ತಿದೆ.ಇದನ್ನು ನಾವು ಖಂಡಿತವಾಗಿಯೂ ವಿರೋಧಿಸುತ್ತೇವೆ. ಒಂದೂವರೆ ವರ್ಷದ ಹಿಂದೆ ಈ ರೀತಿಯ ಯಾವುದೇ ಸಮಸ್ಯೆಗಳು ಇರಲಿಲ್ಲ. ಹಿಜಾಬ್ ಹೆಸರಿನಲ್ಲಿ ನಡೆಯುತ್ತಿರುವ ಧರ್ಮಾದಂತೆಯನ್ನು ಸಹಿಸಲು ಸಾಧ್ಯವೇ ಇಲ್ಲ. ಧರ್ಮದ ಹೆಸರಿನಲ್ಲಿ ಶಿಕ್ಷಣ ವ್ಯವಸ್ಥೆಯಲ್ಲಿ ಅನಗತ್ಯ ಗೊಂದಲಗಳನ್ನು ಸೃಷ್ಟಿಸಬೇಡಿ ಎಂದು ಹೇಳಿದ್ದಾರೆ.
ಹಿಜಾಬ್ ವಿವಾದಲ್ಲಿ ರಾಜ್ಯ ಸರ್ಕಾರವನ್ನು ದೂಷಿಸುತ್ತಿರುವ ಕಾಂಗ್ರೆಸ್ ನಾಯಕರ ಮಾತಿಗೆ ಇದೇ ವೇಳೆ ತಿರುಗೇಟು ನೀಡಿದ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಕಾಂಗ್ರೆಸ್ ನಾಯಕರು ಮತಕ್ಕಾಗಿ ಏನೇನೋ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇಂತಹ ಸಂದಿಗ್ಧ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪರಿಸ್ಥಿತಿಯನ್ನು ಶಾಂತಗೊಳಿಸಲು ತಮ್ಮ ಪ್ರಯತ್ನವನ್ನು ಮಾಡಬೇಕು. ಅದರ ಹೊರತಾಗಿ ಸರ್ಕಾರವನ್ನು ಟೀಕಿಸುವ ಕೆಲಸ ಮಾಡಬಾರದು ಎಂದು ಗುಡುಗಿದ್ದಾರೆ.
ಕಾಲೇಜುಗಳಲ್ಲಿ ಹಿಜಾಬ್ ಸಂಸ್ಕೃತಿಯನ್ನು ವಿರೋಧಿಸಿ ಕೇಸರು ಶಾಲು ಧರಿಸುವ ವಿದ್ಯಾರ್ಥಿಗಳ ವಿಚಾರವಾಗಿ ಪ್ರತಿಕ್ರಿಯಿಸಿದ ಕೋಟ ಶ್ರೀನಿವಾಸ ಪೂಜಾರಿ, ಒಂದನ್ನು ತಪ್ಪು ಎಂದು ಹೇಳಿದ ಮೇಲೆ ಇನ್ನೊಂದು ಕೂಡ ತಪ್ಪೇ ಅಲ್ಲವೇ..? ವಿದ್ಯಾರ್ಥಿಗಳು ಶಾಲಾ ಸಮವಸ್ತ್ರಗಳಿಗೆ ಬದ್ಧರಾಗಿ ಇರಬೇಕು. ಈ ವಿಚಾರವಾಗಿ ಶಿಕ್ಷಣ ಸಂಸ್ಥೆಗಳು ಯಾವುದೇ ಗೊಂದಲಕ್ಕೆ ಒಳಗಾಗುವುದು ಬೇಡ ಎಂದು ಹೇಳಿದರು.
ಇದನ್ನು ಓದಿ : ಶಾಲೆಯಲ್ಲಿ ಹಿಜಾಬ್ ಕೇಳುವವರು, ಮಹಿಳೆಯರಿಗೆ ಮಸೀದಿಯೊಳಗೆ ಪ್ರವೇಶ ಕೊಡಿ : ಸಚಿವ ಸುನೀಲ್ ಕುಮಾರ್
ಇದನ್ನೂ ಓದಿ : ಬೈಂದೂರಲ್ಲಿ ಕಾಲೇಜಿಗೆ ಕೇಸರಿ ಶಾಲು ಧರಿಸಿ ಬಂದ 300 ವಿದ್ಯಾರ್ಥಿಗಳು : ಕರಾವಳಿಯಲ್ಲಿ ಮುಂದುವರಿದ ಹಿಜಬ್ – ಕೇಸರಿ ಶಾಲು ವಿವಾದ
Minister Kota Srinivasa Poojary’s Statement on Hijab Culture