ಸೋಮವಾರ, ಏಪ್ರಿಲ್ 28, 2025
HomeNationalHijab Controversy Supreme Court : ಹಿಜಾಬ್ ವಿವಾದ ಮಧ್ಯ ಪ್ರವೇಶಕ್ಕೆ ಸುಪ್ರೀಂ ಕೋರ್ಟ್‌ ನಕಾರ

Hijab Controversy Supreme Court : ಹಿಜಾಬ್ ವಿವಾದ ಮಧ್ಯ ಪ್ರವೇಶಕ್ಕೆ ಸುಪ್ರೀಂ ಕೋರ್ಟ್‌ ನಕಾರ

- Advertisement -

ನವದೆಹಲಿ : ಹಿಜಾಬ್‌ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ನಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ಗೆ ವರ್ಗಾಯಿಸಬೇಕು ಹಾಗೂ ವಿವಾದಕ್ಕೆ ಸಂಬಂಧಿಸಿದಂತೆ ಮದ್ಯ ಪ್ರವೇಶ ಮಾಡಬೇಕೆಂಬ ಮನವಿಯನ್ನು ಸುಪ್ರೀಂ ಕೋರ್ಟ್‌ (Hijab Controversy Supreme Court) ನಿರಾಕರಿಸಿದೆ. ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಅವರು ಹಿಜಾಬ್‌ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಪರಿಶೀಲನೆಯನ್ನು ನಡೆಸುತ್ತಿದೆ. ಈ ಸಮಯದಲ್ಲಿ ಸುಪ್ರೀಂ ಕೋರ್ಟ್ ಮಧ್ಯಪ್ರವೇಶ ಮಾಡುವುದು ಸೂಕ್ತವಲ್ಲ.‌ ಹೈಕೋರ್ಟ್ ಪರಿಶೀಲಿಸಿ ಸಮಸ್ಯೆಯನ್ನು ನಿರ್ಧರಿಸಲಿ. ಈ ಹಂತದಲ್ಲಿ ನಾವು ಮಧ್ಯ ಪ್ರವೇಶ ಮಾಡುವುದು ಸರಿಯಾಗಿ ಕಾಣುವುದಿಲ್ಲ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವುದನ್ನು ನಿಷೇಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ನಡೆಸಲಿದೆ. ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ ನೇತೃತ್ವದ ತ್ರಿಸದಸ್ಯ ಪೀಠವು ಅರ್ಜಿಯ ವಿಚಾರಣೆ ನಡೆಸಲಿದೆ. ಇತರ ಇಬ್ಬರು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಮತ್ತು ನ್ಯಾಯಮೂರ್ತಿ ಜೈಬುನ್ನಿಸಾ ಎಂ ಖಾಜಿ. ಆರಂಭದಿಂದಲೂ ವಿವಾದದ ಕುರಿತು ವಿಚಾರಣೆಯನ್ನು ನಡೆಸುತ್ತಿದ್ದ ನ್ಯಾಯಮೂರ್ತಿ ಕೃಷ್ಣ ಎಸ್.‌ ದೀಕ್ಷಿತ್‌ ಅವರು ವಿವಾದವನ್ನು ವಿಸ್ತ್ರತ ಪೀಠಕ್ಕೆ ವರ್ಗಾವಣೆಯನ್ನು ಮಾಡಿದ್ದರು.

ಇನ್ನು ಹಿಜಾಬ್‌ ವಿವಾದಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಅಹಿತಕರ ಘಟನೆಗಳು ನಡೆಯದಂತೆ ತಡೆಯುವ ಸಲುವಾಗಿ ಬೆಂಗಳೂರಿನ ನಗರ ಪೊಲೀಸ್‌ ಆಯುಕ್ತರು ಎರಡು ವಾರಗಳ ಕಾಲ ಶಾಲೆ, ಕಾಲೇಜುಗಳ ಸುತ್ತಲೂ ನಿಷೇಧಾಜ್ಞೆಯನ್ನು ಜಾರಿಗೊಳಿಸಿದ್ದರು. ಇನ್ನೊಂದೆಡೆಯಲ್ಲಿ ಶಾಲೆ, ಕಾಲೇಜುಗಳಿಗೆ ಮೂರು ದಿನಗಳ ಕಾಲ ರಾಜ್ಯ ಸರಕಾರ ರಜೆಯನ್ನು ಘೋಷಣೆ ಮಾಡಿದೆ. ಉಡುಪಿಯ ಸರ್ಕಾರಿ ಬಾಲಕಿಯರ ಪಿಯು ಕಾಲೇಜಿನಲ್ಲಿ ಕಳೆದ ತಿಂಗಳು ಹಿಜಾಬ್ ಧರಿಸಲು ಒತ್ತಾಯಿಸಿದ್ದಕ್ಕಾಗಿ ತರಗತಿಗಳಿಂದ ನಿರ್ಬಂಧಿಸಲಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿ ಹಿಜಾಬ್ ಪ್ರತಿಭಟನೆ ನಡೆಸಿದ್ದರು. ನಂತರದಲ್ಲಿ ಕರ್ನಾಟಕದ ವಿವಿಧ ಭಾಗಗಳಲ್ಲಿ ‘ಹಿಜಾಬ್’ ಪರ ಮತ್ತು ವಿರುದ್ಧ ಪ್ರತಿಭಟನೆಗಳು ತೀವ್ರಗೊಂಡವು ಮತ್ತು ಕೆಲವು ಸ್ಥಳಗಳಲ್ಲಿ ಹಿಂಸಾಚಾರಕ್ಕೆ ತಿರುಗಿತ್ತು.

ಹಿಜಾಬ್‌ ವಿವಾದದಲ್ಲಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕಪಿಲ್‌ ಸಿಬಲ್‌

ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಹಿಜಾಬ್ ಪ್ರಕರಣ ಸದ್ಯ ಹೈಕೋರ್ಟ್ ಅಂಗಳದಲ್ಲಿದೆ. ಹೈಕೋರ್ಟ್ ನ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಪೀಠದಿಂದ ವಿಸ್ಕೃತ ಪೀಠಕ್ಕೆ ವರ್ಗಾವಣೆಗೊಂಡಿದ್ದ ಪ್ರಕರಣ ಇಂದು ಹೈಕೋರ್ಟ್ ನ ತ್ರೀಸದಸ್ಯ ಪೀಠದ ಎದುರು ವಿಚಾರಣೆಗೆ ಬರಲಿದೆ. ಈ ಮಧ್ಯೆ ರಾಷ್ಟ್ತವ್ಯಾಪಿ ಚರ್ಚೆಗೆ ಗ್ರಾಸವಾಗಿರುವ ಈ ಪ್ರಕರಣವನ್ನು ಪ್ರಸಿದ್ಧ ನ್ಯಾಯವಾದಿ ಹಾಗೂ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಸುಪ್ರೀಂ ಕೋರ್ಟ್ ಅಂಗಳಕ್ಕೆ ಎಳೆದಿದ್ದಾರೆ.

ಪರೀಕ್ಷಾ ಸಮಯದಲ್ಲಿ ಹಿಜಾಬ್ ಆತಂಜ ವಿದ್ಯಾರ್ಥಿಗಳನ್ನು ಕಾಡುತ್ತಿದೆ. ಹೀಗಾಗಿ ಸುಪ್ರೀಂ ಕೋರ್ಟ್ ನಲ್ಲಿ ಈ ಪ್ರಕರಣದ ವಿಚಾರಣೆ ನಡೆಸಬೇಕೆಂದು ಕಪಿಲ್ ಸಿಬಲ್ ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿದ್ದಾರೆ.‌ ಆದರೆ ಸುಪ್ರೀಂ ಕೋರ್ಟ್ ಹಿಬಾಜ್ ಪ್ರಕರಣದ ವಿಚಾರಣೆಗೆ ನಿರಾಕರಿಸಿದ್ದು, ಕರ್ನಾಟಕ ಹೈಕೋರ್ಟ್ ನಲ್ಲಿ ಈಗಾಗಲೇ ಪ್ರಕರಣ ವಿಚಾರಣೆಯ ಹಂತದಲ್ಲಿದೆ. ಹೀಗಾಗಿ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಳ್ಳಲು ನಿರಾಕರಿಸಿದೆ. ಮುಂದೇ ಏನು ಮಾಡಬಹುದೆಂದು ಪರಿಶೀಲಿಸಲಾಗುತ್ತದೆ ಎಂದಿದೆ. ರಾಜ್ಯ ಹೈಕೋರ್ಟ್ ನಲ್ಲಿ ಪ್ರಕರಣದ ವಿಚಾರಣೆ ನಡೆದು ತೀರ್ಪು ಹೊರಬಂದ ಬಳಿಕ ಸುಪ್ರೀಂ ಕೋರ್ಟ್ ಮುಂದಿನ ನಡೆ ತೀರ್ಮಾನಿಸುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಹೈಕೋರ್ಟ್ ನಲ್ಲಿ ಹಿಬಾಜ್ ಪ್ರಕರಣದ ವಿಚಾರಣೆ ನಡೆದಿದ್ದು, ಉಡುಪಿ ಮೂಲದ ಆರು ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ ಹಿಬಾಜ್ ಧರಿಸಲು ಶಿಕ್ಷಣ ಸಂಸ್ಥೆಯೊಳಗೆ ಅವಕಾಶ ಕಲ್ಪಿಸಬೇಕೆಂಬ ಅರ್ಜಿ ಪರ ವಕೀಲರಾದ ದೇವದತ್ ಕಾಮತ್ ವಾದ ಮಂಡಿಸಿದ್ದಾರೆ. ಇನ್ನು ಶಾಲೆಯಲ್ಲಿ ಸಮವಸ್ತ್ರ ನೀತಿಯನ್ನು ಮಾತ್ರ ಪಾಲಿಸಲು ಅವಕಾಶ ನೀಡಬೇಕೆಂದು ಸರ್ಕಾರದ ಪರ ಅಡ್ವಕೇಟ್ ಜನರಲ್ ಪ್ರಭುಲಿಂಗ್ ನಾವದಗಿ ವಾದ ಮಂಡಿಸಿದ್ದಾರೆ. ಎರಡು ದಿನಗಳ ಕಾಲ ವಿಚಾರಣೆ ನಡೆಸಿದ ಪೀಠ ಬಳಿಕ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ , ಈ ಪ್ರಕರಣ ವಿಸ್ಕೃತ ಪೀಠದ ಎದುರು ವಿಚಾರಣೆ ನಡೆಸೋದು ಸೂಕ್ತ ಎಂದು ಅಭಿಪ್ರಾಯಿಸಿದ್ದರಿಂದ ಇಂದಿನಿಂದ ಪ್ರಕರಣ ಹೈಕೋರ್ಟ್ ನ ಮುಖ್ಯನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ಕೃಷ್ಣ ದಿಕ್ಷೀತ್ ಹಾಗೂ ಖಾಜಿ ಸಮ್ಮುಖದಲ್ಲಿ ವಿಚಾರಣೆಗೆ ಬರಲಿದೆ. ಈ ಮಧ್ಯೆ ಕಾಂಗ್ರೆಸ್ ನ‌ ಕೇಂದ್ರ ನಾಯಕರು ಈ ಪ್ರಕರಣದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ಹೀಗಾಗಿ ತ್ವರೀತ ವಿಚಾರಣೆಗೆ ಕೋರಿ ಸುಪ್ರೀಂ ಕೋರ್ಟ್ ನ ವಕೀಲ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಕಪಿಲ್ ಸಿಬಲ್ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ : ‘ಮಹಿಳೆಯರಿಗೆ ಕಿರುಕುಳ ನೀಡುವುದನ್ನು ಮೊದಲು ನಿಲ್ಲಿಸಿ ’ : ಪ್ರಿಯಾಂಕ ಗಾಂಧಿ ವಾದ್ರಾ ಕಿಡಿ

ಇದನ್ನೂ ಓದಿ : ಹಿಜಬ್​ ಪರ ದನಿಯೆತ್ತಿದ ಮಲಾಲಾ ವಿರುದ್ಧ ಕೌಂಟರ್​ ಮೇಲೆ ಕೌಂಟರ್​ ಕೊಟ್ಟ ಬಿಜೆಪಿ ನಾಯಕರು

( Hijab Controversy Supreme Court Declines Plea To Transfer Petitions From Karnataka High Court)

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular