ಬೆಂಗಳೂರು : ಕೊರೊನಾ ವೈರಸ್ ವಿರುದ್ದದ ಹೋರಾಟಕ್ಕೆ ಉದ್ಯಮಿಗಳು, ಸೆಲೆಬ್ರಿಟಿಗಳು, ಜನಸಾಮಾನ್ಯರು ಸೇರಿದಂತೆ ಹಲವರು ಕೈಜೋಡಿಸಿದ್ದಾರೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಗಳಿಗೆ ದೇಣಿಗೆ ಹರಿದುಬರುತ್ತಿದೆ. ಇದೀಗ ಸಿಎಂ ಬಿ.ಎಸ್.ಯಡಿಯೂರಪ್ಪ ತನ್ನ ಒಂದು ವರ್ಷದ ದೇಣಿಗೆಯನ್ನು ಸಿಎಂ ಪರಿಹಾರ ನಿಧಿಗೆ ನೀಡುವುದಾಗಿ ಘೋಷಿಸಿದ್ದಾರೆ.

ಕೊರೊನಾ ಸೋಂಕು ಹರಡುತ್ತಿದ್ದಂತೆಯೇ ಸಿಎಂ ಪರಿಹಾರ ನಿಧಿಗೆ ದೇಣಿಗೆ ನೀಡುವಂತೆ ಸಿಂಎ ಯಡಿಯೂರಪ್ಪ ರಾಜ್ಯದ ಜನರಲ್ಲಿ ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಕೋಟ್ಯಾಂತರ ರೂಪಾಯಿ ದೇಣಿಗೆ ಹರಿದುಬಂದಿತ್ತು. ಇದೀಗ ಸ್ವತಃ ಯಡಿಯೂರಪ್ಪ ತನ್ನ ಒಂದು ವರ್ಷದ ವೇತನವನ್ನು ದೇಣಿಗೆಯಾಗಿ ನೀಡುವ ಮೂಲಕ ಇತರ ರಾಜಕಾರಣಿಗಳಿಗೆ ಮಾದರಿಯಾಗಿದ್ದಾರೆ. ಈ ಬಗ್ಗೆ ಟ್ವಿಟ್ಟರ್ನಲ್ಲಿ ಮನವಿ ಮಾಡಿರುವ ಯಡಿಯೂರಪ್ಪ ಅವರು ‘ನನ್ನ ಒಂದು ವರ್ಷದ ವೇತನವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿ ಕೋವಿಡ್-19ಕ್ಕೆ ನೀಡುತ್ತಿದ್ದೇನೆ.

ಅದರಂತೆ ಸಂಪುಟ ಸಹೋದ್ಯೋಗಿಗಳು, ಶಾಸಕರು ಸಂಸದರು, ಅಧಿಕಾರಿಗಳು ಕೈಲಾದಷ್ಟು ಸಹಾಯ ಮಾಡಿ’ ಎಂದು ಮನವಿ ಮಾಡಿದ್ದಾರೆ.