ನವದೆಹಲಿ : ದೇಶದಲ್ಲಿ ಮಹಾಮಾರಿ ಕೊರೊನಾ ವೈರಸ್ ಆರ್ಭಟ ಮುಂದುವರಿದಿದೆ. ಕಳೆದ 24 ಗಂಟೆಗಳಲ್ಲಿ 11 ಮಂದಿ ಕೊರೊನಾ ಮಹಾಮಾರಿಗೆ ಬಲಿಯಾಗಿದ್ದು, 472 ಹೊಸ ಪ್ರಕರಣಗಳು ಪತ್ತೆಯಾಗಿದೆ ಹೀಗಂತ ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ ಅಗರ್ವಾಲ್ ಮಾಹಿತಿ ನೀಡಿದ್ದಾರೆ.

ಕೇಂದ್ರ ಆರೋಗ್ಯ ಸಚಿವಾಲಯ ನೀಡಿರುವ ಅಂಕಿ ಅಂಶಗಳ ಪ್ರಕಾರ ದೇಶದಲ್ಲಿ ಈವರೆಗೆ ಒಟ್ಟು 3,774 ಮಂದಿ ಕೊರೊನಾ ಸೋಂಕಿಗೆ ತುತ್ತಾಗಿದ್ದು, 79 ಮಂದಿಯನ್ನು ಕೊರೊನಾ ಮಹಾಮಾರಿ ಬಲಿ ಪಡೆದಿದೆ. ಇದುವರೆಗೆ ದೇಶದಲ್ಲಿ ಕೊರೊನಾ ಸೋಂಕಿಗೆ ತುತ್ತಾಗಿದ್ದ 267 ಮಂದಿ ಗುಣಮುಖರಾಗಿದ್ದಾರೆ ಅಂತಾ ಹೇಳಿದ್ದಾರೆ.

ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ವೈರಸ್ ನ್ನು ಹತೋಟಿಗೆ ತರುವ ನಿಟ್ಟಿನಲ್ಲಿ ರಾಪಿಡ್ ಟೆಸ್ಟ್ ಗಳು ವೈದ್ಯಕೀಯ ಸಿಬ್ಬಂಧಿಯ ಕೈ ಸೇರೋದಾಗಿ ಆರೋಗ್ಯ ಸಚಿವಾಲಯ ತಿಳಿಸಿದೆ. ಈ ರಾಪಿಡ್ ಟೆಸ್ಟ್ ಕಿಟ್ ಗಳಿಂದ ಕ್ಷಿಪ್ರವಾಗಿ ಕೊರೊನಾ ಪರೀಕ್ಷಿಸಬಹುದಾಗಿದೆ.

ಇನ್ನೊಂದು ಮುಖ್ಯವಾದ ಅಂಶವೇನೆಂದರೆ ಗಾಳಿಯಿಂದ ಕೊರೊನಾ ಹರಡುವುದಿಲ್ಲ ಅಂತಾ ಆರೋಗ್ಯ ಸಚಿವಾಲಯ ಸ್ಪಷ್ಟಪಡಿಸಿದೆ.