ಮಂಗಳೂರು : ಕೊರೊನಾ ಸೋಂಕು ಹರಡುತ್ತಿರೋ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ ಲಭಿಸಿರುವ 28 ಮಂದಿಯ ಕೊರೊನಾ ತಪಾಸಣಾ ವರದಿ ನೆಗೆಟಿವ್ ಬಂದಿದೆ. ಭಾನುವಾರ ಹೊಸದಾಗಿ ಮತ್ತೆ 21 ಮಂದಿ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಮೂರು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇದುವರೆ ಒಟ್ಟು 28631 ಮಂದಿಯನ್ನು ಸ್ಕ್ರೀನಿಂಗ್ ಗೆ ಒಳಪಡಿಸಲಾಗಿದ್ದು, 4461 ಮಂದಿ ಹೋಮ್ ಕ್ವಾರಂಟೈನ್ ನಲ್ಲಿದ್ದಾರೆ. ಈ ಪೈಕಿ 1,342 ಮಂದಿ 28 ದಿನಗಳ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರೈಸಿದ್ದಾರೆ. ಅವರಲ್ಲಿ ಯಾವುದೇ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿಲ್ಲ. ಇನ್ನು ಮಂಗಳೂರಿನ ಇಎಸ್ ಐ ಆಸ್ಪತ್ರೆಯಲ್ಲಿ 15 ಮಂದಿಯನ್ನು ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ.

ಜಿಲ್ಲೆಯಿಂದ ಒಟ್ಟು 310 ಮಂದಿಯ ಗಂಟಲು ದ್ರವದ ಮಾದರಿಯ ಪರೀಕ್ಷಾ ವರದಿ ಕೈಸೇರಿದ್ದು, ಈ ಪೈಕಿ 298 ಮಂದಿಯ ವರದಿ ನೆಗೆಟಿವ್ ಬಂದಿದ್ರೆ, 12 ಮಂದಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ ಎಂದಿದ್ದಾರೆ.