ಬೆಂಗಳೂರು : psi recruitment scam : 545 ಪಿಎಸ್ಐ ಹುದ್ದೆಗಳಿಗೆ ನೇಮಕಾತಿ ಅಕ್ರಮ ಪ್ರಕರಣ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ರಾಜಕೀಯ ಕೆಸರೆರೆಚಾಟಕ್ಕೆ ವೇದಿಕೆ ಕಲ್ಪಿಸಿದಂತಾಗಿದೆ. ಪಿಎಸ್ಐ ಹುದ್ದೆಗಳಿಗೆ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಈಗಿನ ಪರೀಕ್ಷೆಗಳನ್ನು ರದ್ದುಗೊಳಿಸಿ ಮರು ಪರೀಕ್ಷೆ ನಡೆಸಲಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ. ಸರ್ಕಾರದ ಈ ನಿರ್ಧಾರ ಬಳಿಕ ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಲಿಖಿತ ಪರೀಕ್ಷೆಯಲ್ಲಿ ಮಾತ್ರವಲ್ಲ ದೈಹಿಕ ಪರೀಕ್ಷೆಯಲ್ಲಿಯೂ ಅಕ್ರಮ ನಡೆದಿದೆ ಎಂಬ ಹೊಸ ಬಾಂಬ್ ಸಿಡಿಸಿದ್ದಾರೆ.
ರಾಜ್ಯದಲ್ಲಿ ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಮೊದಲು ಹೇಳಿಕೆ ನೀಡಿದ್ದೇ ಶಾಸಕ ಪ್ರಿಯಾಂಕ್ ಖರ್ಗೆ. ಇಂದು ರಾಜ್ಯ ಸರ್ಕಾರದ ನಿರ್ಧಾರದ ಬಳಿಕವೂ ಮತ್ತೆ ಸುದ್ದಿಗೋಷ್ಠಿ ಕರೆದ ಪ್ರಿಯಾಂಕ್ ಖರ್ಗೆ ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಸರ್ಕಾರದ ನಡೆಯ ಬಗ್ಗೆ ತೀವ್ರ ಅಸಮಾಧಾನ ಹೊರ ಹಾಕಿದರು.
ಈ ಪ್ರಕರಣದಲ್ಲಿ ದಿವ್ಯಾಳ ಬಂಧನವಾಗುತ್ತಿದ್ದಂತೆಯೇ ಸರ್ಕಾರವು ಮರು ಪರೀಕ್ಷೆಯ ನಿರ್ಧಾರವನ್ನು ಪ್ರಕಟಿಸಿದೆ. ಈ ಹಿಂದೆ ಅಕ್ರಮವೇ ನಡೆದಿಲ್ಲ ಎನ್ನುತ್ತಿದ್ದ ಬಿಜೆಪಿ ನಾಯಕರು ಇದೀಗ ಮರು ಪರೀಕ್ಷೆ ನಡೆಸಲು ಮುಂದಾಗಿದ್ದಾರೆ. ಈ ಪ್ರಕರಣದಲ್ಲಿ ಕೇವಲ ದಿವ್ಯಾ ಹಾಗೂ ರುದ್ರೇಗೌಡ ಮಾತ್ರ ಕಿಂಗ್ ಪಿನ್ಗಳಲ್ಲ. ಇನ್ನೂ ಅನೇಕರಿದ್ದಾರೆ.ಸಿಐಡಿ ಅಧಿಕಾರಿಗಳು ಕೇವಲ ಕಲಬುರಗಿಯನ್ನು ಮಾತ್ರ ಸೀಮಿತಿಗೊಳಿಸಿ ತನಿಖೆ ನಡೆಸುತ್ತಿದ್ದಾರೆ. ಹುಬ್ಬಳ್ಳಿ, ಬೆಂಗಳೂರು ಹಾಗೂ ಬೆಳಗಾವಿಯಲ್ಲಿ ಪಿಎಸ್ಐ ನೇಮಕಾತಿ ಗೋಲ್ಮಾಲ್ ನಡೆದಿದೆ. ಸಿಐಡಿ ಅಧಿಕಾರಿಗಳು ತಮ್ಮ ತನಿಖಾ ವ್ಯಾಪ್ತಿಯನ್ನು ವಿಸ್ತರಿಸಬೇಕಿದೆ ಎಂದು ಆಗ್ರಹಿಸಿದರು.
ರಾಜ್ಯ ಸರ್ಕಾರ ಪಿಎಸ್ಐ ಲಿಖಿತ ಪರೀಕ್ಷೆಯನ್ನು ಪುನಃ ಮಾಡುವುದಾಗಿ ಹೇಳಿದೆ. ಈ ನಿರ್ಧಾರ ಸ್ವಾಗತಾರ್ಹ. ಆದರೆ ಕೇವಲ ಲಿಖಿತ ಪರೀಕ್ಷೆಯಲ್ಲಿ ಮಾತ್ರ ಗೋಲ್ಮಾಲ್ ನಡೆದಿದೆಯೇ..? ದೈಹಿಕ ಪರೀಕ್ಷೆಯಲ್ಲಿ ಗೋಲ್ಮಾಲ್ ನಡೆದಿಲ್ಲವಾ..? ಈ ಬಗ್ಗೆ ರಾಜ್ಯ ಸರ್ಕಾರ ತನ್ನ ನಿರ್ಧಾರವನ್ನು ಕೂಡಲೇ ತಿಳಿಸಬೇಕು. ಪಿಜಿಕಲ್, ಬ್ಲೂಟೂತ್ ಹಾಗೂ ಒಎಂಆರ್ ಸೇರಿದಂತೆ ಮೂರು ರೀತಿಯ ಅಕ್ರಮ ನಡೆದಿದೆ. ಮುನ್ನೂರಕ್ಕೂ ಅಧಿಕ ಮಂದಿ ಈ ಪರೀಕ್ಷೆಯಲ್ಲಿ ಅಕ್ರಮ ನಡೆಸಿದ್ದಾರೆ.ಆದರೆ ಸಿಐಡಿ ಅಧಿಕಾರಿಗಳಿಗೆ ಈವರೆಗೆ ಏಳೆಂಟು ಮಂದಿಯನ್ನು ಮಾತ್ರ ಬಂಧಿಸಿದ್ದಾರೆ. ಅಕ್ರಮ ಎಸಗಿದವರಿಗೆ ಪರೀಕ್ಷೆ ಬರೆಯಲು ಮತ್ತೆ ಅವಕಾಶ ಕೊಡುತ್ತೀರಾ..? ಎಂದು ಪ್ರಶ್ನೆ ಮಾಡಿದ್ದಾರೆ.
ಇದನ್ನು ಓದಿ : Aravind Kaushik Arrest : ಸ್ಯಾಂಡಲ್‌ವುಡ್ ನಿರ್ದೇಶಕ ಅರವಿಂದ ಕೌಶಿಕ್ ಅರೆಸ್ಟ್
psi recruitment scam karnataka government decides to conduct reexam but congress mla priyank kharge wants know physical test or written test