ಸೋಮವಾರ, ಜೂನ್ 16, 2025
HomekarnatakaBIG BREAKING : ಖಾಸಗಿ ಬಸ್‌ - ಟೆಂಪೋ ಭೀಕರ ಅಪಘಾತ : ಮಗು ಸೇರಿ...

BIG BREAKING : ಖಾಸಗಿ ಬಸ್‌ – ಟೆಂಪೋ ಭೀಕರ ಅಪಘಾತ : ಮಗು ಸೇರಿ ಐವರು ಸಜೀವ ದಹನ

- Advertisement -

ಕಲಬುರಗಿ : ಖಾಸಗಿ ಬಸ್‌ ಹಾಗೂ ಟೆಂಪೋ ನಡುವೆ ನಡೆದ ಭೀಕರ ಅಪಘಾತದಲ್ಲಿ ಬಸ್ಸಿಗೆ ಬೆಂಕಿ ಹೊತ್ತಿಕೊಂಡು ಮಗು ಸೇರಿದಂತೆ ಐವರು ಸಜೀವವಾಗಿ ದಹನವಾದ (Private bus Tempo accident ) ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರದಲ್ಲಿ ನಡೆದಿದೆ.

ಗೋವಾದಿಂದ ಹೈದ್ರಾಬಾದ್‌ಗೆ ತೆರಳುತ್ತಿದ್ದ ಖಾಸಗಿ ಬಸ್‌ಗೆ ಕಮಲಾಪುರದ ಬಳಿಯಲ್ಲಿ ಟೆಂಪೋ ಢಿಕ್ಕಿ ಹೊಡೆದಿದೆ. ಇದರಿಂದಾಗಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಸ್ಸಿನಲ್ಲಿ ಇದ್ದವರು ಕೆಳಗೆ ಇಳಿಯುವ ಮೊದಲೇ ಬಸ್‌ ಸುಟ್ಟು ಹೋಗಿದೆ. ಬಸ್ಸಿನಲ್ಲಿ ಒಟ್ಟು 20 ಮಂದಿ ಪ್ರಯಾಣಿಸುತ್ತಿದ್ದು, ಈ ಪೈಕಿ 5 ಮಂದಿ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಹಲವರು ಗಾಯಗೊಂಡಿದ್ದಾರೆ. ಸ್ಥಳೀಯರ ಸಹಕಾರದಿಂದ ಬಸ್ಸಿನಲ್ಲಿ ಹದಿನೈದು ಮಂದಿಯನ್ನು ರಕ್ಷಣೆ ಮಾಡಲಾಗಿದೆ.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಬೆಂಕಿ ನಂದಿಸುವ ಕಾರ್ಯವನ್ನು ಮಾಡುತ್ತಿದ್ದಾರೆ. ಭೀಕರ ಅಪಘಾತದಿಂದಾಗಿ ರಸ್ತೆಯಲ್ಲಿ ಟ್ರಾಫಿಕ್‌ ಜಾಮ್‌ ಉಂಟಾಗಿದೆ.

ಇದನ್ನೂ ಓದಿ : ಹಾಡುತ್ತಿರುವಾಗಲೇ ಸಾವನ್ನಪ್ಪಿದ ಖ್ಯಾತ ಗಾಯಕ ಕೃಷ್ಣಕುಮಾರ್ ಕುಂನಾತ್

ಇದನ್ನೂ ಓದಿ : Prashath : ಹಾಸನದಲ್ಲಿ ಡಾ.ರಾಜ್ ಅಭಿಮಾನಿ ಕುಟುಂಬದ ಸದಸ್ಯನ ಬರ್ಬರ ಹತ್ಯೆ: ಪ್ರತಿಕಾರಕ್ಕಾಗಿ ನಡೆಯಿತಾ ಪ್ರಶಾಂತ್ ಹತ್ಯೆ

Private bus Tempo accident 5 burns to death in Kalburgi

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular