ಬೆಂಗಳೂರು : ಡೆಡ್ಲಿ ಕೊರೊನಾ ಮಹಾಮಾರಿಯ ಅಬ್ಬರದ ರಾಜ್ಯದಲ್ಲಿ ಜೋರಾಗುತ್ತಿದೆ. ರಾಜ್ಯದಲ್ಲಿ ಒಂದೇ ದಿನ 15 ಹೊಸ ಪ್ರಕರಣಗಳು ಪತ್ತೆಯಾಗಿವೆ. ಹೀಗಾಗಿ ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ 247ಕ್ಕೆ ಏರಿಕೆಯಾಗಿದೆ.

ಹುಬ್ಬಳ್ಳಿ ಧಾರವಾಡದಲ್ಲಿ 4, ಮಂಡ್ಯದಲ್ಲಿ 3, ಬೆಳಗಾವಿಯಲ್ಲಿ 3, ಬೀದರ್ ನಲ್ಲಿ 2, ಬಾಗಲಕೋಟೆ, ದೊಡ್ಡಬಳ್ಳಾಪುರ ಹಾಗೂ ಬೆಂಗಳೂರು ನಗರ ಜಿಲ್ಲೆಗಳಲ್ಲಿ ತಲಾ ಒಂದು ಕೊರೊನಾ ಪ್ರಕರಣ ಪತ್ತೆಯಾಗಿದೆ. ನಿನ್ನೆ 11 ಹೊಸ ಪ್ರಕರಣ ಪತ್ತೆಯಾಗಿದ್ದು, ಇಂದು 15 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಕೊರೊನಾ ಸೋಂಕಿತರಾಗಿದ್ದ ರಾಜ್ಯದ 59 ಮಂದಿ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ.