Eknath Shinde : ಮಹಾರಾಷ್ಟ್ರ ರಾಜಕೀಯದಲ್ಲಿ ದಿನಕ್ಕೊಂದು ಟ್ವಿಸ್ಟ್ ಎದುರಾಗುತ್ತಲೇ ಇದೆ. ಉದ್ಧವ್ ಠಾಕ್ರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ದೇವೇಂದ್ರ ಫಡ್ನವಿಸ್ ಮಹಾರಾಷ್ಟ್ರದ ಮುಂದಿನ ಸಿಎಂ ಆಗ್ತಾರೆ ಅಂತಲೇ ಹೇಳಲಾಗಿತ್ತು. ಅಲ್ಲದೇ ಇಂದು ಸಂಜೆ ಫಡ್ನವಿಸ್ ಮುಖ್ಯಮಂತ್ರಿಯಾಗಿ ಪದಗ್ರಹಣ ಕೂಡ ಮಾಡ್ತಾರೆ ಎಂದೆಲ್ಲ ವರದಿಯಾಗಿತ್ತು. ಆದರೆ ಇದೀಗ ಮಹಾರಾಷ್ಟ್ರ ರಾಜಕೀಯದಲ್ಲಿಯೇ ಬಹುದೊಡ್ಡ ಟ್ವಿಸ್ಟ್ ಎಂಬಂತೆ ಶಿವಸೇನೆಯ ಬಂಡಾಯ ಶಾಸಕ ಏಕನಾಥ್ ಶಿಂಧೆ ಮಹಾರಾಷ್ಟ್ರದ ಸಿಎಂ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ. ಏಕನಾಥ್ ಶಿಂಧೆ ಮಹಾರಾಷ್ಟ್ರದ ಮುಂದಿನ ಸಿಎಂ ಎಂದು ಬಿಜೆಪಿ ನಾಯಕ ಹಾಗೂ ಮಹಾರಾಷ್ಟ್ರ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಘೋಷಣೆ ಮಾಡಿದ್ದಾರೆ.
ಉದ್ಧವ್ ಠಾಕ್ರೆ ನಾಯಕತ್ವದ ಮಹಾ ಅಘಾಡಿ ಸರ್ಕಾರವನ್ನು ಉರುಳಿಸುವಲ್ಲಿ ಮಹತ್ವದ ಪಾತ್ರವನ್ನು ವಹಿಸಿದ್ದೇ ಶಿವಸೇನೆ ನಾಯಕ ಏಕನಾಥ್ ಶಿಂಧೆ. ಆಸ್ಸಾಂನ ಗುವಾಹಟಿಗೆ ಬಂಡಾಯ ಶಾಸಕರ ಜೊತೆ ತೆರಳಿದ್ದ ಶಿಂಧೆ ಸದ್ದಿಲ್ಲದೇ ಬಿಜೆಪಿ ಜೊತೆ ಕೈ ಜೋಡಿಸಿದ್ದರು. ಗುವಾಹಟಿಯಿಂದ ಗೋವಾಗೆ ತೆರಳಿ ಬಳಿಕ ಮುಂಬೈಗೆ ಆಗಮಿಸಿದ್ದ ಶಿಂಧೆ ಈ ಬಾರಿ ಡಿಸಿಎಂ ಪಟ್ಟಕ್ಕೆ ಏರುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡಿತ್ತು.
ಬಿಜೆಪಿಯು ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಯ ಹಕ್ಕನ್ನು ಮಂಡಿಸಿದೆ. ಕೆಲವು ಕ್ಷಣಗಳ ಹಿಂದೆ ಬಿಜೆಪಿ ನಾಯಕ ಹಾಗೂ ಮಾಜಿ ಸಿಎಂ ದೇವೆಂದ್ರ ಫಡ್ನವಿಸ್, ಶಾಸಕ ಏಕನಾಥ್ ಶಿಂಧೆ ಸೇರಿದಂತೆ ಹಲವು ನಾಯಕರು ರಾಜ ಭವನಕ್ಕೆ ತೆರಳಿ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿಯನ್ನು ಭೇಟಿಯಾಗಿ ಸರ್ಕಾರ ರಚನೆಯ ಹಕ್ಕನ್ನು ಮಂಡಿಸಿದ್ದಾರೆ. ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಭೇಟಿ ಬಳಿಕ ರಾಜಭವನದಿಂದ ಹೊರ ಬಂದು ಮಾತನಾಡಿದ ದೇವೇಂದ್ರ ಫಡ್ನವಿಸ್ ಮಹಾರಾಷ್ಟ್ರದ ಮುಂದಿನ ಸಿಎಂ ಏಕನಾಥ್ ಶಿಂಧೆ ಎಂದು ಘೋಷಣೆ ಮಾಡಿದ್ದಾರೆ.
ನಾನು ಈ ಸರ್ಕಾರದ ಭಾಗವಾಗಿರುವುದಿಲ್ಲ. ಮಹಾರಾಷ್ಟ್ರದ ಮುಂದಿನ ಸಿಎಂ ಆಗಿ ಏಕನಾಥ್ ಶಿಂಧೆ ಪ್ರಮಾಣ ವಚನ ಸ್ವೀಕರಿಸುತ್ತಾರೆ ಎಂದು ದೇವೇಂದ್ರ ಫಡ್ನವಿಸ್ ಘೋಷಣೆ ಮಾಡಿದ್ದಾರೆ. ಕಳೆದ ಹಲವು ದಿನಗಳಿಂದ ರೋಚಕ ತಿರುವುಗಳನ್ನು ಪಡೆದಿದ್ದ ಮಹಾರಾಷ್ಟ್ರ ರಾಜ್ಯ ರಾಜಕಾರಣಕ್ಕೆ ಈ ಮೂಲಕ ಮಹತ್ವದ ತೆರೆ ಬಿದ್ದಂತಾಗಿದೆ. –
ಇದನ್ನು ಓದಿ : ನಿನ್ನನ್ನು ನೋಡಿ ಖುಷಿಯಾಗುತ್ತಿದೆ..” ಸಚಿನ್ ಪುತ್ರನ ಬಗ್ಗೆ ಇಂಗ್ಲೆಂಡ್ ಮಹಿಳಾ ಕ್ರಿಕೆಟರ್ ಹೀಗೆ ಹೇಳಿದ್ದೇಕೆ ?
ಇದನ್ನೂ ಓದಿ : KL Rahul : ಕೆ.ಎಲ್ ರಾಹುಲ್ಗೆ ಯಶಸ್ವಿ ಶಸ್ತ್ರಚಿಕಿತ್ಸೆ : ಶೀಘ್ರ ಚೇತರಿಕೆಯ ಹಾದಿಯಲ್ಲಿದ್ದೇನೆಂದ ಕನ್ನಡಿಗ
Eknath Shinde will be the next Chief Minister of Maharashtra