ಬೆಂಗಳೂರು : former cm hd kumaraswamy : ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಕೊರೊನಾ ಸೋಂಕು ಇರುವುದು ವೈದ್ಯಕೀಯ ಪರೀಕ್ಷೆಗಳಲ್ಲಿ ದೃಢಪಟ್ಟಿದೆ. ಈ ಸಂಬಂಧ ಹೆಚ್.ಡಿ ಕುಮಾರಸ್ವಾಮಿ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ . ಕಳೆದ ಕೆಲವು ತಿಂಗಳ ಹಿಂದೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಕೂಡ ಕೊರೊನಾ ಸೋಂಕಿಗೆ ಒಳಗಾಗಿ ಬಳಿಕ ಗುಣಮುಖರಾಗಿದ್ದರು.
ನನಗೆ ಸಣ್ಣ ಪ್ರಮಾಣದಲ್ಲಿ ಮೈ -ಕೈ ನೋವು ಹಾಗೂ ಜ್ವರ ಕಾಣಿಸಿಕೊಂಡಿದ್ದು ಕೋವಿಡ್ ಪರೀಕ್ಷೆ ನಡೆಸಿದಾಗ ನನಗೆ ಕೋವಿಡ್ ಪಾಸಿಟಿವ್ ಎಂದು ಬಂದಿದೆ. ಕೋವಿಡ್ ಲಕ್ಷಣಗಳು ಇರುವುದರಿಂದ ವೈದ್ಯರು ಹೋಮ್ ಐಸೋಲೇಷನ್ನಲ್ಲಿದ್ದು ಸೂಕ್ತ ಚಿಕಿತ್ಸೆ ಪಡೆದುಕೊಳ್ಳುವಂತೆ ಸೂಚನೆ ನೀಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಟ್ವೀಟಾಯಿಸಿದ್ದಾರೆ .
ಸಣ್ಣ ಪ್ರಮಾಣದ ಜ್ವರ, ಮೈಕೈ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಾನು ಇಂದು ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು, ಫಲಿತಾಂಶ ಪಾಸಿಟಿವ್ ಎಂದು ಬಂದಿದೆ.
— H D Kumaraswamy (@hd_kumaraswamy) July 11, 2022
ಕೋವಿಡ್ ಲಕ್ಷಣಗಳು ಕಾಣಿಸಿಕೊಂಡಿರುವ ಕಾರಣ, ವೈದ್ಯರು ಹೋಮ್ ಐಸೋಲೇಷನ್ʼನಲ್ಲಿಯೇ ಇದ್ದು ಚಿಕಿತ್ಸೆ ಪಡೆಯುವಂತೆ ಸೂಚಿಸಿದ್ದಾರೆ.
ಅಲ್ಲದೇ ತಮ್ಮ ಸಂಪರ್ಕಕ್ಕೆ ಬಂದಿರುವ ಯಾರೇ ಇದ್ದರೂ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ವೈದ್ಯರು ನೀಡಿರುವ ಸಲಹೆಯ ಪ್ರಕಾರ ನಾನು 10 ದಿನಗಳ ಕಾಲ ಮನೆಯಲ್ಲಿ ಐಸೋಲೇಷನ್ ಆಗಿ ಚಿಕಿತ್ಸೆ ಪಡೆದುಕೊಳ್ಳಲಿದ್ದೇನೆ. ಈ ಸಮಯದಲ್ಲಿ ದಯಮಾಡಿ ಯಾರೂ ನನ್ನ ಭೇಟಿ ಮಾಡಲೆಂದು ಬಾರದಂತೆ ನಾನು ವಿನಂತಿಸುತ್ತಿದ್ದೇನೆ. ಯಾರೂ ಅನ್ಯತಾ ಭಾವಿಸಬೇಡಿ. ಕಳೆದ ಮೂರ್ನಾಲ್ಕು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ದಯಮಾಡಿ ಕೋವಿಡ್ ಪರೀಕ್ಷೆಗೆ ಒಳಗಾಗಿ ಎಂದು ಕುಮಾರ ಸ್ವಾಮಿ ಮನವಿ ಮಾಡಿದ್ದಾರೆ.
ಇತ್ತ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 673 ಕೋವಿಡ್ ಸೋಂಕು ವರದಿಯಾಗಿದೆ. ಕಳೆದ 24 ಗಂಟೆಗಳಲ್ಲಿ 852 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದೊಂದು ದಿನದಲ್ಲಿ ಓರ್ವ ಸೋಂಕಿತರು ಕೋವಿಡ್ನಿಂದ ಮೃತಪಟ್ಟಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕೃತ ಮಾಹಿತಿ ನೀಡಿದೆ.
ಇದನ್ನು ಓದಿ : Cute Peacock : ಪ್ಲೀಸ್ ನನ್ನ ಫೋಟೋ ತೆಗಿಬೇಡಿ ! ಮುದ್ದಾಗಿ ನುಲಿದ ನವಿಲು !!!
ಇದನ್ನೂ ಓದಿ : ಸಿಎಂ ಕುರ್ಚಿಗೆ ಕಂಟಕವಾಗುತ್ತಾ ಮೀಸಲಾತಿ ಹೋರಾಟ : ಸಿಎಂ ಬಸವರಾಜ್ ಬೊಮ್ಮಾಯಿಗೆ ಎದುರಾಗ್ತಿದೆ ಡೆಡ್ ಲೈನ್ ಕಾಟ
ಇದನ್ನೂ ಓದಿ : Mallikarjun Kharge Next CM : ಕರ್ನಾಟಕದಲ್ಲಿ ಬಾರಿ ಅತಂತ್ರ ವಿಧಾನಸಭೆ : ಜೆಡಿಎಸ್ ಜೊತೆ ಸಂಘರ್ಷ ಬೇಡ ಎಂದ ಹೈಕಮಾಂಡ್, ಖರ್ಗೆ ಸಿಎಂ ?
former cm hd Kumaraswamy tested corona virus positive