ಸೋಮವಾರ, ಏಪ್ರಿಲ್ 28, 2025
HomeSportsCricketPakistan Captain Babar Backs Kohli : “ಧೈರ್ಯವಾಗಿರು ಗೆಳೆಯ” ಪಾಕ್ ನಾಯಕನಿಂದ ವಿರಾಟ್ ಕೊಹ್ಲಿ...

Pakistan Captain Babar Backs Kohli : “ಧೈರ್ಯವಾಗಿರು ಗೆಳೆಯ” ಪಾಕ್ ನಾಯಕನಿಂದ ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ !

- Advertisement -

ಲಂಡನ್: ಬ್ಯಾಟಿಂಗ್ ಫಾರ್ಮ್ ಕಳೆದುಕೊಂಡಿರುವ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಬಗ್ಗೆ ಭಾರತೀಯ ಕ್ರಿಕೆಟ್”ನ ದಿಗ್ಗಜರೆಲ್ಲಾ ಟೀಕೆ ಮಾಡುತ್ತಿದ್ದಾರೆ. ಆದರೆ ವೃತ್ತಿಜೀವನದ ಅತ್ಯಂತ ಕಠಿಣ ಸನ್ನಿವೇಶವನ್ನು ಎದುರಿಸುತ್ತಿರುವ ವಿರಾಟ್ ಕೊಹ್ಲಿ ಪರವಾಗಿ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಮ್ ಬ್ಯಾಟಿಂಗ್ ಮಾಡಿದ್ದಾರೆ (Pakistan Captain Babar Backs Kohli )

ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) 2019ರಿಂದ ಅಂತಾರಾಷ್ಟ್ರೀಯ ಕ್ರಿಕೆಟ್”ನಲ್ಲಿ ಶತಕ ಗಳಿಸಿಲ್ಲ. ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಏಕದಿನ ಸರಣಿಯ (India Vs England ODI Series) ಮೊದಲ ಪಂದ್ಯವನ್ನು ತೊಡೆಸಂಧು (Groin Injury) ಗಾಯದ ಕಾರಣ ತಪ್ಪಿಸಿಕೊಂಡಿದ್ದ ಕೊಹ್ಲಿ, ಲಾರ್ಡ್ಸ್ ಮೈದಾನದಲ್ಲಿ ಗುರುವಾರ ನಡೆದ 2ನೇ ಪಂದ್ಯದಲ್ಲಿ ಆಡಿದ್ದರು. ಆದರೆ 3 ಆಕರ್ಷಕ ಬೌಂಡರಿಗಳೊಂದಿಗೆ ಉತ್ತಮ ಆರಂಭ ಪಡೆದರೂ, ಕೇವಲ 16 ರನ್ ಗಳಿಸಿ ಔಟಾಗಿದ್ದರು. ಈ ಪಂದ್ಯದಲ್ಲಿ ಭಾರತ 100 ರನ್”ಗಳ ಸೋಲು ಕಂಡಿತ್ತು.

ಇಂಗ್ಲೆಂಡ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲೂ ವೈಫಲ್ಯ ಕಾಣುವುದರೊಂದಿಗೆ ವಿರಾಟ್ ಕೊಹ್ಲಿ ಕಳೆದ 77 ಅಂತಾರಾಷ್ಟ್ರೀಯ ಇನ್ನಿಂಗ್ಸ್’ಗಳಲ್ಲಿ ಶತಕದ ಬರ ಎದುರಿಸುತ್ತಿದ್ದಾರೆ. 2019ರ ನವೆಂಬರ್”ನಲ್ಲಿ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಶತಕ ಬಾರಿಸಿದ ನಂತರ, ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್’ನಲ್ಲಿ ಶತಕ ಸಿಡಿಸಿಲ್ಲ. ಇಂಗ್ಲೆಂಡ್ ಪ್ರವಾಸದಲ್ಲಿನ ಟೆಸ್ಟ್, ಟಿ20 ಹಾಗೂ ಏಕದಿನ ಸರಣಿಯಲ್ಲಿ ದಯನೀಯ ವೈಫಲ್ಯ ಎದುರಿಸಿರುವ ವಿರಾಟ್ ಕೊಹ್ಲಿ ವಿರುದ್ಧ ಭಾರತದ ದಿಗ್ಗಜ ಆಟಗಾರರು ಟೀಕೆ ಮಾಡುತ್ತಿದ್ದಾರೆ. ಆದರೆ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಮ್, ಕೊಹ್ಲಿ ಪರವಾಗಿ ಬ್ಯಾಟ್ ಬೀಸಿದ್ದಾರೆ.

ಕಳೆದ ವರ್ಷ ದುಬೈನಲ್ಲಿ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಜೊತೆ ಟಾಸ್”ಗೆ ತೆರಳುತ್ತಿರುವ ಫೋಟೋವನ್ನು ಟ್ವಿಟರ್”ನಲ್ಲಿ ಪ್ರಕಟಿಸಿರುವ ಬಾಬರ್ ಅಜಮ್, “ಈ ಕಠಿಣ ಸಮಯದಿಂದ ಆದಷ್ಟು ಬೇಗ ಹೊರ ಬರಲಿದ್ದೀರಿ, ಧೈರ್ಯವಾಗಿರಿ” ಎಂದು ಬರೆದುಕೊಂಡಿದ್ದಾರೆ. ಪಾಕಿಸ್ತಾನದ ಈಗಿನ ಬಹುತೇಕ ಯುವ ಬ್ಯಾಟ್ಸ್”ಮನ್”ಗಳಿಗೆ ವಿರಾಟ್ ಕೊಹ್ಲಿ ರೋಲ್ ಮಾಡೆಲ್. ಸ್ವತಃ ನಾಯಕ ಬಾಬರ್ ಅಜಮ್ ಕೂಡ ವಿರಾಟ್ ಕೊಹ್ಲಿ ಅವರ ದೊಡ್ಡ ಅಭಿಮಾನಿ. ಅಂತಾರಾಷ್ಟ್ರೀಯ ಕ್ರಿಕೆಟ್’ನಲ್ಲಿ ಅಮೋಘ ಆಟ ಪ್ರದರ್ಶಿಸುತ್ತಿರುವ ಬಾಬರ್ ಅವರನ್ನು ವಿರಾಟ್ ಕೊಹ್ಲಿಗೆ ಹೋಲಿಸಲಾಗುತ್ತಿದೆ.

ಇದನ್ನೂ ಓದಿ : Robin Uthappa blessed with a baby girl : ರಾಬಿನ್ ಉತ್ತಪ್ಪಗೆ ಹೆಣ್ಣು ಮಗು, 2ನೇ ಮಗುವಿಗೆ ತಂದೆಯಾದ ಕೊಡಗಿನ ವೀರ

ಇದನ್ನೂ ಓದಿ : BCCI Ignored Sanju Samson : ನತದೃಷ್ಟ ಸಂಜು ಸ್ಯಾಮ್ಸನ್ ! ಮುಂಬೈಕರ್ ಭವಿಷ್ಯಕ್ಕಾಗಿ ಕೇರಳ ಆಟಗಾರನಿಗೆ ಇದೆಂಥಾ ಅನ್ಯಾಯ ?

Pakistan Captain Babar Backs Kohli

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular