ಬೈಂದೂರು : ಅತೀ ವೇಗವಾಗಿ ಬಂದ ಅಂಬ್ಯುಲೆನ್ಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಟೋಲ್ ಕಂಬಕ್ಕೆ ಢಿಕ್ಕಿ ಹೊಡೆದ ಭೀಕರ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರಿನಲ್ಲಿರುವ ಟೋಲ್‌ಗೇಟ್‌ನಲ್ಲಿ (Ambulance hits Shiroor toll) ನಡೆದಿದೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಿಂದ ಕುಂದಾಪುರಕ್ಕೆ ರೋಗಿಗಳನ್ನು ಸಾಗಾಟ ಮಾಡುತ್ತಿದ್ದ ವೇಳೆಯಲ್ಲಿ ಅಂಬ್ಯುಲೆನ್ಸ್ ವಾಹನ ಶಿರೂರು ಟೋಲ್ ಪ್ಲಾಝಾ ಬಳಿಗೆ ಬರುತ್ತಿದ್ದಂತೆಯೇ ಚಾಲಕನ ನಿಯಂತ್ರಣ ತಪ್ಪಿದೆ. ಈ ವೇಳೆಯಲ್ಲಿ ಟೋಲ್ ಪ್ಲಾಝಾದಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡಲು ಮುಂದಾಗಿದ್ದಾರೆ. ಆದ್ರೆ ವೇಗವಾಗಿ ಬಂದ ಅಂಬ್ಯುಲೆನ್ಸ್ ಟೋಲ್ ಫ್ಲಾಝಾದಲ್ಲಿನ ಕಂಬಕ್ಕೆ ಢಿಕ್ಕಿ ಹೊಡೆದಿದೆ.

ಅಂಬ್ಯುಲೆನ್ಸ್‌ನಲ್ಲಿದ್ದವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಲ್ಲದೇ ಅಂಬ್ಯುಲೆನ್ಸ್‌ಗೆ ಸಂಚಾರಕ್ಕೆ ನೆರವು ನೀಡಲು ಮುಂದಾಗಿದ್ದ ಟೋಲ್ ಸಿಬ್ಬಂದಿಗಳು ಕೂಡ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಿರೂರು ಟೋಲ್‌ನಲ್ಲಿ ನಡೆದಿರುವ ಘಟನೆ ಇದೀಗ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ವಿಡಿಯೋದಲ್ಲಿ ಅಪಘಾತವನ್ನು ನೋಡಿದ್ರೆ ಬೆಚ್ಚಿ ಬೀಳಿಸುವಂತಿದೆ. ಅಪಘಾತದ ತೀವ್ರತೆಗೆ ಅಂಬ್ಯುಲೆನ್ಸ್ ಜಖಂ ಆಗಿದೆ. ಇನ್ನು ಅಂಬ್ಯುಲೆನ್ಸ್ ಅಪಘಾತಕ್ಕೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಬೈಂದೂರು ಠಾಣೆಯ ಪೊಲೀಸರು ಪ್ರಕರಣವನ್ನು ದಾಖಲು ಮಾಡಿಕೊಂಡಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.
ವೇಗವಾಗಿ ಬಂದು ಶಿರೂರು ಟೋಲ್ ಫ್ಲಾಝಾಕ್ಕೆ ಢಿಕ್ಕಿಯಾದ ಅಂಬ್ಯುಲೆನ್ಸ್ : ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ ಭೀಕರ ದೃಶ್ಯ #shiroorTollplaza #shioortoll #BREAKING #Bigbreaking #kundapura #Udupi pic.twitter.com/7VhhyWrbXG
— News Next (@newsnext_live) July 20, 2022
ಇದನ್ನೂ ಓದಿ : ಮಕ್ಕಳ ಕೈಗೆ ಚಾಕಲೇಟ್ ನೀಡುವ ಮುನ್ನ ಹುಷಾರ್ : ಬೈಂದೂರಲ್ಲಿ ಚಾಕಲೇಟ್ ನುಂಗಿ ಉಸಿರುಗಟ್ಟಿ ಶಾಲಾ ಬಾಲಕಿ ಸಾವು
ಇದನ್ನೂ ಓದಿ : I love Virat .. ಇಂಗ್ಲೆಂಡ್ ಟೆಸ್ಟ್ ಕ್ಯಾಪ್ಟನ್ ಬೆನ್ ಸ್ಟೋಕ್ಸ್ ಯಾಕೆ ಹೀಗಂದ್ರು ?
ಇದನ್ನೂ ಓದಿ : same-sex marriage : ಸಲಿಂಗ ವಿವಾಹ ಬೆಂಬಲಿಸುವ ಮಸೂದೆಗೆ ಅಮೆರಿಕದಲ್ಲಿ ಅಂಗೀಕಾರ
ಇದನ್ನೂ ಓದಿ : yash movie : ಬಾಲಿವುಡ್ನಲ್ಲಿ ರಿಮೇಕ್ ಆಗಲಿದೆ ರಾಕಿಂಗ್ ಸ್ಟಾರ್ ಯಶ್ ನಟನೆಯ ಈ ಸಿನಿಮಾ
Ambulance hits Shiroor toll pole: Horrific scene captured on CC camera