ಬೆಂಗಳೂರು: (KL Rahul offers special Pooja ) ಟೀಮ್ ಇಂಡಿಯಾದ ಸ್ಟಾರ್ ಕ್ರಿಕೆಟಿಗ ಕೆ.ಎಲ್ ರಾಹುಲ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ದಲ್ಲಿರುವ ಘಾಟಿ ಸುಬ್ರಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಆತ್ಮೀಯ ಸ್ನೇಹಿತರ ಜೊತೆ ಭಾನುವಾರ ಸಂಜೆ ಘಾಟಿ ಸುಬ್ರಮಣ್ಯ ದೇವಾಲಯಕ್ಕೆ ಭೇಟಿ ಕೊಟ್ಟ ರಾಹುಲ್, ವಿಶೇಷ ಪೂಜೆ ಸಲ್ಲಿಸಿದರು. ಸ್ಪೋರ್ಟ್ಸ್ ಹರ್ನಿಯಾ ಸಮಸ್ಯೆಗೆ ಜರ್ಮನಿ ಯಲ್ಲಿ ಶಸ್ತ್ರ ಚಿಕಿತ್ಸೆಗೊಳಗಾಗಿದ್ದ ರಾಹುಲ್, ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಭಾರತ ತಂಡದ ನಾಯಕತ್ವ ವಹಿಸುವ ಅವಕಾಶದಿಂದ ವಂಚಿತರಾಗಿದ್ದರು. ನಂತರ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೂ ಅಲಭ್ಯರಾಗಿದ್ದರು. ಶಸ್ತ್ರಚಿಕಿತ್ಸೆಯಿಂದ ಚೇತರಿಸಿಕೊಂಡು ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ಸಜ್ಜಾಗುತ್ತಿದ್ದ ವೇಳೆ ರಾಹುಲ್ ಕೋವಿಡ್-19 ಪಾಸಿಟಿವ್’ಗೆ ಗುರಿಯಾಗಿದ್ದರು. ಹೀಗಾಗಿ ವೆಸ್ಟ್ ಇಂಡೀಸ್ ಸರಣಿ ಹಾಗೂ ಜಿಂಬಾಬ್ವೆ ಪ್ರವಾಸಕ್ಕೆ ರಾಹುಲ್ ಅಲಭ್ಯರಾಗಿದ್ದಾರೆ. ಆಗಸ್ಟ್ 27ರಿಂದ ದುಬೈನಲ್ಲಿ ನಡೆಯಲಿರುವ ಏಷ್ಯಾ ಕಪ್ ಟಿ20 ಟೂರ್ನಿಯ ಮೂಲಕ ರಾಹುಲ್ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡಲಿದ್ದಾರೆ.
ಏಷ್ಯಾ ಕಪ್ ಟಿ20 ಟೂರ್ನಿ ಆಗಸ್ಟ್ 27ರಂದು ಆರಂಭವಾಗಲಿದ್ದು, ಆಗಸ್ಟ್ 28ರಂದು ದುಬೈನಲ್ಲಿ ನಡೆಯಲಿರುವ ತನ್ನ ಮೊದಲ ಪಂದ್ಯದಲ್ಲಿ ಭಾರತ ತಂಡ, ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಎದುರಿಸಲಿದೆ.
ಏಷ್ಯಾಕಪ್ ಟಿ20 (Asia Cup 2022) ಟೂರ್ನಿಯ ವೇಳಾಪಟ್ಟಿ
Group A
ಭಾರತ Vs ಪಾಕಿಸ್ತಾನ: 28 ಆಗಸ್ಟ್, ದುಬೈ
ಭಾರತ Vs ಕ್ವಾಲಿಫೈಯರ್ ಟೀಮ್: 31 ಆಗಸ್ಟ್, ದುಬೈ
ಪಾಕಿಸ್ತಾನ Vs ಕ್ವಾಲಿಫೈಯರ್ ಟೀಮ್: 02 ಸೆಪ್ಟೆಂಬರ್, ಶಾರ್ಜಾ
Group B
ಶ್ರೀಲಂಕಾ Vs ಅಫ್ಘಾನಿಸ್ತಾನ: 27 ಆಗಸ್ಟ್, ದುಬೈ
ಬಾಂಗ್ಲಾದೇಶ Vs ಅಫ್ಘಾನಿಸ್ತಾನ: 30 ಆಗಸ್ಟ್, ಶಾರ್ಜಾ
ಶ್ರೀಲಂಕಾ Vs ಬಾಂಗ್ಲಾದೇಶ: 01 ಸೆಪ್ಟೆಂಬರ್, ದುಬೈ
ಇದನ್ನೂ ಓದಿ : RP Singh Son Harry Singh : ಇಂಗ್ಲೆಂಡ್ U-19 ತಂಡಕ್ಕೆ ಆಯ್ಕೆಯಾದ ಟೀಮ್ ಇಂಡಿಯಾ ಮಾಜಿ ವೇಗಿ ಆರ್.ಪಿ ಸಿಂಗ್ ಪುತ್ರ
KL Rahul offers special Pooja, Cricketer KL Rahul paid special pooja to Ghati Subrahmanyam