ಕೊಡಗು : Siddaramaiahs vehicle : ಕೊಡಗು ಜಿಲ್ಲೆಯ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಲು ಜಿಲ್ಲೆಗೆ ಆಗಮಿಸಿರುವ ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ವಿರೋಧವನ್ನು ಎದುರಿಸಿದ್ದಾರೆ. ವಿರಾಜಪೇಟೆ ತಾಲೂಕಿನ ತಿತಿಮತಿ ಮೂಲಕ ಆಗಮಿಸಿದ್ದ ಸಿದ್ದರಾಮಯ್ಯಗೆ ಬಿಜೆಪಿ ಕಾರ್ಯಕರ್ತರು ಘೇರಾವ್ ಆಗಿದ್ದಾರೆ. ಸಿದ್ದರಾಮಯ್ಯ ಆಗಮಿಸುತ್ತಿದ್ದಂತೆಯೇ ಬಿಜೆಪಿ ಕಾರ್ಯಕರ್ತರು ಸಿದ್ದರಾಮಯ್ಯ ಗೋ ಬ್ಯಾಕ್ ಎಂದು ಘೋಷಣೆ ಕೂಗಿದ್ದು ಮಾತ್ರವಲ್ಲದೇ ವಾಹನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಸಿದ್ದರಾಮಯ್ಯ ಕೊಡಗು ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆಂದು ತಿಳಿದ ಬಳಿಕ ನಿನ್ನೆಯಿಂದಲೇ ಸೋಶಿಯಲ್ ಮೀಡಿಯಾದಲ್ಲಿ ಬಿಜೆಪಿ ಯುವ ಮೋರ್ಚಾದ ಸದಸ್ಯರು ಗೋ ಬ್ಯಾಕ್ ಸಿದ್ದರಾಮಯ್ಯ ಅಭಿಯಾನ ಆರಂಭಿಸಿದ್ದರು. ಟಿಪ್ಪು ಶಿಷ್ಯ ಸಿದ್ದಾರಮಯ್ಯ ಎಂದು ಆಕ್ರೋಶ ಹೊರ ಹಾಕಿದ್ದ ಬಿಜೆಪಿ ಕಾರ್ಯಕರ್ತರು ಸಿದ್ದು ಖಾನ್ ಕೊಡಗಿಗೆ ಆಗಮನದ ಸೂತಕ ಎಂದು ಕಿಡಿಕಾರಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ಕೊಡಗು ಜಿಲ್ಲೆಗೆ ಭೇಟಿ ನೀಡುತ್ತಿದ್ದಂತೆಯೇ ಬಿಜೆಪಿ ಕಾರ್ಯಕರ್ತರು ಕಪ್ಪು ಬಾವುಟವನ್ನು ಪ್ರದರ್ಶಿಸಿದ್ದಾರೆ. ತಿತಿಮಿತಿ ಎಂಬಲ್ಲಿ ಸಿದ್ದರಾಮಯ್ಯ ವಿರುದ್ಧ ಘೋಷಣೆ ಮೊಳಗಿದೆ. ಸಿದ್ದರಾಮಯ್ಯ ಗೋ ಬ್ಯಾಕ್ ಎಂದು ಘೋಷಣೆ ಕೂಗಿದ್ದಾರೆ. ಸಿದ್ದರಾಮಯ್ಯ ವಾಹನವನ್ನು ಮುತ್ತಿಗೆ ಹಾಕಲು ಪ್ರಯತ್ನಿಸುತ್ತಿದ್ದಂತೆಯೇ ಪೊಲೀಸರು ಪ್ರತಿಭಟನಾಕಾರರನ್ನು ನಿಯಂತ್ರಿಸಿದ್ದಾರೆ. ಪ್ರತಿಭಟನಾಕಾರರು ಟಿಪ್ಪು ಶಿಷ್ಯ ಸಿದ್ದು ಖಾನ್ ಎಂದು ಘೋಷಣೆ ಕೂಗಿದ್ದಾರೆ.
ಸಾವರ್ಕರ್ ಅವರ ಭಾವಚಿತ್ರ ಹಾಕಿರುವ ಕುರಿತಂತೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ನೀಡಿರುವ ಹೇಳಿಕೆಗೆ ಬಿಜೆಪಿ ನಾಯಕರು, ಕಾರ್ಯಕರ್ತರು ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ. ಇದರ ಬೆನ್ನಲ್ಲೇ ಮಡಿಕೇರಿಯಲ್ಲಿ ಸಿದ್ದರಾಮಯ್ಯ ಅವರಿಗೆ ಘೇರಾವ್ ಹಾಕಿರುವ ಕುರಿತು ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ದ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇನ್ನೊಂದೆಡೆಯಲ್ಲಿ ಘಟನೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ.
ಇದನ್ನು ಓದಿ : Janaki Sudhir photo viral : ಮೈಗೆ ಬಟ್ಟೆ ಬದಲು ಬಂಗಾರ ಸುತ್ತಿಕೊಂಡ ಸುಂದರಿ: ಜಾನಕಿ ಸುಧೀರ್ ಪೋಟೋ ವೈರಲ್
As soon as Siddaramaiahs vehicle arrived in Kodagu district, BJP workers protested