ನವದೆಹಲಿ : ಟ್ರಕ್ ಹಾಗೂ ಟ್ರ್ಯಾಕ್ಟರ್ ನಡುವೆ ನಡೆದ ಭೀಕರ ಅಪಘಾತದಲ್ಲಿ 5 ಸಾವನ್ನಪ್ಪಿ 25 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಜಸ್ಥಾನದ (Rajasthan) ಪಾಲಿ ಜಿಲ್ಲೆಯಲ್ಲಿ ನಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಟ್ರಾಕ್ಟರ್ ಟ್ರಾಲಿಯಲ್ಲಿ ಜೈಸಲ್ಮೇರ್ ಜಿಲ್ಲೆಯ ರಾಮದೇವರ ದೇವಸ್ಥಾನಕ್ಕೆ ಭೇಟಿ ನೀಡಲು ಹೋಗುತ್ತಿದ್ದಾಗ ರಾಜಸ್ಥಾನದ ಪಾಲಿ ಜಿಲ್ಲೆಯ ಸುಮರ್‌ಪುರದ ಬಳಿಯಲ್ಲಿ ವೇಗವಾಗಿ ಬಂದ ಟ್ರಕ್ ಟ್ರ್ಯಾಕ್ಟರ್ ಟ್ರ್ಯಾಲಿಗೆ ಅವರಿಗೆ ಢಿಕ್ಕಿ ಹೊಡೆದಿದೆ. ಸ್ಥಳದಲ್ಲಿಯೇ ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ ಮತ್ತು 25 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎನ್ನಲಾಗುತ್ತಿದೆ.
Rajasthan | Visuals from the accident site at Sumerpur in Pali district where a tractor collided with a truck leaving over 5 people dead & as many as 25 injured https://t.co/FPHSNP85Wm pic.twitter.com/mpbScSImt5
— ANI MP/CG/Rajasthan (@ANI_MP_CG_RJ) August 19, 2022
ಮಾಹಿತಿ ಪಡೆದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಅಂಬ್ಯುಲೆನ್ಸ್‌ಗಳ ಮೂಲಕ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಪೊಲೀಸರು ಗಾಯಳುಗಳ ಕುರಿತು ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಮೇಲ್ನೋಟಕ್ಕೆ ಟ್ರಕ್ ಚಾಲಕನ ಅಜಾಗರೂಕತೆ ಎದ್ದು ಕಾಣಿಸುತ್ತಿದೆ. ಇದೀಗ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ. ಇನ್ನು ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.
The accident in Pali, Rajasthan is saddening. In this hour of grief, my thoughts are with the bereaved families. I pray for a speedy recovery of those injured: PM @narendramodi
— PMO India (@PMOIndia) August 19, 2022
ಭೀಕರ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ರಾಜಸ್ಥಾನದ ಪಾಲಿಯಲ್ಲಿ ಸಂಭವಿಸಿದ ಅಪಘಾತವು ದುಃಖಕರವಾಗಿದೆ. ಈ ದುಃಖದ ಸಮಯದಲ್ಲಿ, ನನ್ನ ಆಲೋಚನೆಗಳು ದುಃಖಿತ ಕುಟುಂಬಗಳೊಂದಿಗೆ ಇವೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲು ನಾನು ಪ್ರಾರ್ಥಿಸುತ್ತೇನೆ” ಎಂದು ಪ್ರಧಾನಿ ಕಾರ್ಯಾಲಯ ಟ್ವೀಟ್‌ನಲ್ಲಿ ತಿಳಿಸಿದೆ.
Anguished by the loss of lives in a road accident in Pali, Rajasthan. My heartfelt condolences to the bereaved families and prayers for the speedy recovery of the injured.
— Vice President of India (@VPSecretariat) August 19, 2022
ರಾಜಸ್ಥಾನದ ಪಾಲಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಪ್ರಾಣಹಾನಿಯಿಂದ ದುಃಖವಾಗಿದೆ. ದುಃಖತಪ್ತ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಸಂತಾಪ ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲು ಪ್ರಾರ್ಥಿಸುತ್ತೇನೆ” ಎಂದು ಉಪ ರಾಷ್ಟ್ರಪತಿ ಕಚೇರಿ ಟ್ವೀಟ್ ಮಾಡಿದೆ.
ಇದನ್ನೂ ಓದಿ : Gautam Gambhir : ಭಾರತ ಪರ ಮತ್ತೆ ಬ್ಯಾಟ್ ಹಿಡಿದು ಅಬ್ಬರಿಸಲಿದ್ದಾರೆ ವಿಶ್ವಕಪ್ ಹೀರೋ, ಸಂಸದ ಗೌತಮ್ ಗಂಭೀರ್
ಇದನ್ನೂ ಓದಿ : Swamiji cheated : ನಿಧಿ ಇದೆ ಎಂದು ನಂಬಿಸಿ ದಂಪತಿಗೆ ಪಂಗನಾಮ ಹಾಕಿದ ಕಳ್ಳ ಸ್ವಾಮೀಜಿ
Rajasthan Tractor Truck Accident Five killed, over 25 hurt in Pali