ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಇಂದು ಒಂದೇ ದಿನ 9 ಮಂದಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ಮೂಲಕ ಕೊರೊನಾ ಪೀಡಿತರ ಸಂಖ್ಯೆ 598ಕ್ಕೆ ಏರಿಕೆಯಾಗಿದೆ.

ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆಯಲ್ಲಿ ಇಳಿಕೆಯಾಗಿದೆ. ಇಂದು ಬೆಂಗಳೂರಿನ ಟಿಪ್ಪುನಗರದ ವ್ಯಕ್ತಿಯೋರ್ವನಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದರೆ.

ಇನ್ನು ತುಮಕೂರು ಹಾಗೂ ವಿಜಯಪುರದಲ್ಲಿ ತಲಾ ಇಬ್ಬರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದರೆ. ಬೆಳಗಾವಿ, ಬೀದರ್, ಬಾಗಲಕೋಟೆ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ತಲಾ ಒಬ್ಬೊಬ್ಬರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.