ಬೆಂಗಳೂರು : (Umesh Katti passes away) ಆಹಾರ ಇಲಾಖೆಯ ಸಚಿವ ಉಮೇಶ್ ಕತ್ತಿ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆಯ ಬೆಲ್ಲದ ಬಾಗೇವಾಡಿಯಲ್ಲಿ ಅಂತ್ಯಕ್ರೀಯೆ ನಡೆಯಲಿದ್ದು, ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಪಾರ್ಥಿವ ಶರೀರವನ್ನು ಕೊಂಡೊಯ್ಯಲು ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಉಮೇಶ್ ಕತ್ತಿ ನಿಧನಕ್ಕೆ ಗಣ್ಯರು ಕಂಬನಿ ಮಿಡಿದಿದ್ದಾರೆ.
ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಮನೆಯಲ್ಲಿ ಇದ್ದ ವೇಳೆಯಲ್ಲಿಉಮೇಶ್ ಕತ್ತಿ ಅವರಿಗೆ ಹೃದಯಾಘಾತ ಸಂಭವಿಸಿದೆ. ಕೂಡಲೇ ಕುಟುಂಬಸ್ಥರು ಅವರನ್ನು ನಗರದ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ವೈದ್ಯರು ತುರ್ತು ಚಿಕಿತ್ಸಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಿದ್ದಾರೆ. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಬಾರದ ಲೋಕಕ್ಕೆ ಪಯಣಿಸಿದ್ದಾರೆ.
ಸಚಿವ ಉಮೇಶ್ ಕತ್ತಿ ಅವರಿಗೆ ಈ ಹಿಂದೆ ಎರಡು ಬಾರಿ ಹೃದಯಾಘಾತವಾಗಿತ್ತು. ಈ ಹಿನ್ನೆಲೆಯಲ್ಲಿ ಅವರಿಗೆ ಸ್ಟಂಟ್ ಅಳವಡಿಸಲಾಗಿತ್ತು. ಆದ್ರೀಗ ಮೂರನೇ ಬಾರಿಗೆ ಅವರಿಗೆ ಹೃದಯಾಘಾತವಾಗಿದ್ದು, ಸಾವನ್ನಪ್ಪಿದ್ದಾರೆ. ಉಮೇಶ್ ಕತ್ತಿ ಅವರ ಸಹೋದರ ಮಾಜಿ ಸಂಸದ ರಮೇಶ್ ಕತ್ತಿ ಹಾಗೂ ಕುಟುಂಬಸ್ಥರು ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಸಂಪುಟದಲ್ಲಿ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಖಾತೆಯ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದಾರೆ. 1985ರಲ್ಲಿ ವಿಧಾನಸಭೆ ಸದಸ್ಯರಾಗಿದ್ದ ಅವರ ತಂದೆ ವಿಶ್ವನಾಥ ಕತ್ತಿಯವರ ನಿಧನದ ನಂತರ ಅವರು ರಾಜಕೀಯ ಪ್ರವೇಶಿಸಿದರು. ಅವರು 2013 ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಹುಕ್ಕೇರಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಜಯಗಳಿಸಿದ್ದರು. ಸದ್ಯ ಉತ್ತರ ಕರ್ನಾಟಕ ಭಾಗದ ಪ್ರಭಾವಿ ರಾಜಗಳಲ್ಲಿ ಒಬ್ಬರಾಗಿರುವ ಉಮೇಶ್ ಕತ್ತಿ ಪ್ರತ್ಯೇಕ ರಾಜ್ಯದ ಕೂಗಿನ ಮೂಲಕ ಅವರು ರಾಜ್ಯದ ಗಮನ ಸೆಳೆದಿದ್ದರು. ಉಮೇಶ್ ಕತ್ತಿ ಅವರ ನಿಧನಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಸೇರಿದಂತೆ ರಾಜಕೀಯ ಕ್ಷೇತ್ರದ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಅರಣ್ಯ ಸಚಿವ, ನನ್ನ ಆಪ್ತ ಸಹೋದ್ಯೋಗಿ ಶ್ರೀ ಉಮೇಶ್ ಕತ್ತಿ ಅವರ ಅಕಾಲಿಕ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಅವರ ನಿಧನದಿಂದ ರಾಜ್ಯ ಓರ್ವ ನುರಿತ ಮುತ್ಸದ್ಧಿ,ಕ್ರಿಯಾಶೀಲ ಮುಖಂಡ ಹಾಗೂ ನಿಷ್ಠಾವಂತ ಜನಸೇವಕನನ್ನು ಕಳೆದುಕೊಂಡಿದೆ. ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ pic.twitter.com/tcfNlw9Cdr
— Basavaraj S Bommai (@BSBommai) September 6, 2022
ಇದನ್ನೂ ಓದಿ : Pet Dog Bites Boy : ಲಿಫ್ಟ್ನಲ್ಲಿ ಬಾಲಕನ ಮೇಲೆ ಶ್ವಾನದಿಂದ ಡೆಡ್ಲಿ ಅಟ್ಯಾಕ್ : ಮೈ ಝುಂ ಎನ್ನಿಸುತ್ತೆ ಈ ವಿಡಿಯೋ
ಇದನ್ನೂ ಓದಿ : Umesh katti Heart Attack : ಸಚಿವ ಉಮೇಶ್ ಕತ್ತಿಗೆ ಹೃದಯಾಘಾತ : ಆಸ್ಪತ್ರೆಗೆ ದಾಖಲು
Karnataka Umesh Katti Passes away after heart attack in Ramaiah Hospital Bangalore Breaking news