ಮಂಗಳೂರು : Praveen Nettaru NIA raids SDPI : ಹಿಂದೂ ಕಾರ್ಯಕರ್ತ ಹಾಗೂ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ನಿನ್ನೆಯಷ್ಟೇ ಎನ್ಐಎ ಅಧಿಕಾರಿಗಳು ಪುತ್ತೂರು ಹಾಗೂ ಸುಳ್ಯ ತಾಲೂಕುಗಳಲ್ಲಿ ದಾಳಿಯನ್ನು ನಡೆಸಿದ್ದರು. ಇದೀಗ ಬಂಟ್ವಾಳ ತಾಲೂಕಿನಲ್ಲಿಯೂ ಎನ್ಐಎ ತನ್ನ ದಾಳಿಯನ್ನು ಮುಂದುವರಿಸಿದೆ. ಬಿಜೆಪಿ ಮುಖಂಡನ ಹತ್ಯೆ ಪ್ರಕರಣದಲ್ಲಿ ಎಸ್ಡಿಪಿಐ ಪಾತ್ರ ಇರುವುದು ಮೇಲ್ನೋಟಕ್ಕೆ ಅತ್ಯಂತ ಬಲವಾಗಿ ಗೋಚರಿಸುತ್ತಿರುವ ಹಿನ್ನೆಲೆಯಲ್ಲಿ ಎನ್ಐಎ ಅಧಿಕಾರಿಗಳ ತಂಡ ಎಸ್ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಜ್ ಪರಂಗಿಪೇಟೆ ಮನೆ ಮೇಲೆ ದಾಳಿ ನಡೆಸಿದೆ.
ಇಂದು ಬೆಳಗ್ಗೆಯೇ ರಿಯಾಜ್ ಪರಂಗಿಪೇಟೆಗೆ ಶಾಕ್ ನೀಡಿದ ಎನ್ಐಎ ಅಧಿಕಾರಿಗಳು ರಿಯಾಜ್ ಮನೆಗೆ ತೆರಳಿ ಮೊಬೈಲ್ ವಶಕ್ಕೆ ಪಡೆದಿದ್ದು ಮನೆಯ ಇಂಚಿಂಚನ್ನೂ ಪರಿಶೀಲಿಸುತ್ತಿದ್ದಾರೆ. ರಿಯಾಜ್ ನಿವಾಸದ ಮೇಲೆ ಎನ್ಐಎ ಅಧಿಕಾರಿಗಳಿಂದ ದಾಳಿ ವಿಚಾರ ಬೆಳಕಿಗೆ ಬರುತ್ತಿದ್ದಂತೆಯೇ ಕೆರಳಿದ ಎಸ್ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು ಗೋ ಬ್ಯಾಕ್ ಎನ್ಐಎ ಎಂದು ಘೋಷಣೆ ಕೂಗುತ್ತಿದ್ದಾರೆ.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಎನ್ಐಎ ಅಧಿಕಾರಿಗಳು ನಿನ್ನೆ ಸುಳ್ಯ ಹಾಗೂ ಪುತ್ತೂರು ತಾಲೂಕುಗಳಲ್ಲಿ ಒಟ್ಟು 32 ಕಡೆಗಳಲ್ಲಿ ದಾಳಿ ನಡೆಸಿದ್ದರು. ಇಂದು ಬಿ.ಸಿ ರೋಡ್ನಲ್ಲಿರುವ ರಿಯಾಜ್ ಪರಂಗಿಪೇಟೆ ನಿವಾಸದಲ್ಲಿ ಬಂಟ್ವಾಳ ಪೊಲೀಸರ ಭದ್ರತೆಯೊಂದಿಗೆ ಎನ್ಐಎ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದ ಸಮೀಪದ ನೆಟ್ಟಾರೆ ಎಂಬ ಕುಗ್ರಾಮದವರಾದ ಪ್ರವೀಣ್ ಬೆಳ್ಳಾರೆ ಗ್ರಾಮದಲ್ಲಿ ಚಿಕನ್ ಅಂಗಡಿ ನಡೆಸುತ್ತಿದ್ದರು. ಜುಲೈ 26ರ ರಾತ್ರಿ ಸಮಯದಲ್ಲಿ ತಮ್ಮ ಕೋಳಿ ಅಂಗಡಿಯನ್ನು ಬಂದ್ ಮಾಡಿ ಮನೆಗೆ ವಾಪಸ್ಸಾಗಲು ಮುಂದಾಗುತ್ತಿದ್ದ ಸಂದರ್ಭದಲ್ಲಿ ಬೈಕ್ನಲ್ಲಿ ಬಂದಿದ್ದ ದುಷ್ಕರ್ಮಿಗಳು ಪ್ರವೀಣ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಪ್ರವೀಣ್ರನ್ನು ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಲಾಗಿತ್ತಾದರೂ ಸಹ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದರು. ಈ ಪ್ರಕರಣ ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದ್ದು ಮಾತ್ರವಲ್ಲದೇ ಬಿಜೆಪಿ ಭದ್ರಕೋಟೆಯಾದ ಕರಾವಳಿ ಭಾಗದಲ್ಲಿಯೇ ಜನರು ಕೇಸರಿ ಪಾಳಯದ ವಿರುದ್ಧ ಸಿಡಿದೇಳುವಂತೆ ಮಾಡಿತ್ತು.
ಇದನ್ನು ಓದಿ : Angry Afghanistan Fans: ಪಾಕ್ ವಿರುದ್ಧ ಪಂದ್ಯ ಸೋತ ಸಿಟ್ಟಿಗೆ ಶಾರ್ಜಾ ಕ್ರೀಡಾಂಗಣವನ್ನೇ ಚಿಂದಿ ಉಡಾಯಿಸಿದ ಆಫ್ಘನ್ ಕ್ರಿಕೆಟ್ ಫ್ಯಾನ್ಸ್
ಇದನ್ನೂ ಓದಿ : BBMP’s work in rain damage : ರಾಜ್ಯ ರಾಜಧಾನಿಯಲ್ಲಿ ವರುಣನ ಅವಾಂತರ : ನೆರೆ ಸಂತ್ರಸ್ತರ ಕರೆಗಿಲ್ಲ ಬಿಬಿಎಂಪಿ ಸ್ಪಂದನೆ
Praveen Nettaru murder case NIA raids SDPI national secretary Riyaz Farangipete house