ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ದೇಶದಾದ್ಯಂತ ಲಾಕ್ ಡೌನ್ ಆದೇಶ ಜಾರಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಶೀಘ್ರದಲ್ಲಿಯೇ ನಡೆಸಲು ಶಿಕ್ಷಣ ಇಲಾಖೆ ಸಿದ್ದತೆ ಮಾಡಿಕೊಂಡಿದೆ. ಅಲ್ಲದೇ ಡಿಡಿಪಿಐಗಳಿಗೆ ಸಚಿವರೇ ಖುದ್ದು ಸೂಚನೆ ನೀಡಿದ್ದಾರೆ.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಲಾಕ್ ಡೌನ್ ಆದೇಶವನ್ನು ಸಡಿಲ ಮಾಡಲಾಗಿದೆ. ಅದ್ರಲ್ಲೂ ಮೇ 17ರಂದು ಮೂರನೇ ಹಂತದ ಲಾಕ್ ಡೌನ್ ಮುಕ್ತಾಯಗೊಳ್ಳಲಿದೆ. ಹೀಗಾಗಿ ಕೊರೊನಾ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಸದ್ಯದಲ್ಲಿಯೇ ನಡೆಸಲು ಚಿಂತನೆ ನಡೆಸಲಾಗಿದೆ.

ಪ್ರೌಢ ಹಾಗೂ ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಎಲ್ಲಾ ಜಿಲ್ಲೆಗಳ ಡಿಡಿಪಿಐಗಳ ಜೊತೆಗೆ ವಿಡಿಯೋ ಕಾನ್ಪರೆನ್ಸ್ ನಡೆಸಿದ್ದಾರೆ. ಎಸ್ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸಾಮಾಜಿಕ ಅಂತರವನ್ನು ಕಾಪಾಡುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತ ಸುರೇಶ್ ಕುಮಾರ್ ಅವರು ಸೂಚನೆಯನ್ನು ನೀಡಿದ್ದಾರೆ.

ಪ್ರತೀ ಪರೀಕ್ಷಾ ಕೊಠಡಿಗಳಲ್ಲಿ ಕೇವಲ 24 ವಿದ್ಯಾರ್ಥಿಗಳಿಗೆ ಮಾತ್ರವೇ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಬೇಕು. ಹೀಗಾಗಿ ಹೆಚ್ಚುವರಿ ಕೊಠಡಿಗಳ ವ್ಯವಸ್ಥೆಯನ್ನು ಮಾಡಿಕೊಳ್ಳಲು ಸೂಚಿಸಲಾಗಿದೆ. ಎಸ್ಎಸ್ಎಲ್ ಸಿ ಪರೀಕ್ಷಾ ಕೊಠಡಿಗಳಲ್ಲಿ ಪ್ರತೀ ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ ಸ್ಕ್ರೀನಿಂಗ್ ಗೆ ಒಳಪಡಿಸುವುದರ ಜೊತೆಗೆ ವಿದ್ಯಾರ್ಥಿಗಳಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ವ್ಯವಸ್ಥೆ ಕಲ್ಪಿಸಬೇಕು. ಇನ್ನು ಕಂಟೈನ್ಮೆಂಟ್ ಪರೀಕ್ಷಾ ಕೇಂದ್ರಗಳನ್ನು ಶೀಪ್ಟ್ ಮಾಡುವಂತೆ ಸೂಚನೆ ನೀಡಲಾಗಿದೆ.