ಮೈಸೂರು/ಕೊಡಗು : Bharat Jodo Yatra : ಕಾಂಗ್ರೆಸ್ನ ಭಾರತ್ ಜೋಡೋ ಯಾತ್ರೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ನಾಲ್ಕನೇ ದಿನವಾದ ಇಂದು ಭಾರತ್ ಜೋಡೊ ಯಾತ್ರೆ ರೂವಾರಿ ರಾಹುಲ್ ಗಾಂಧಿ ಜೊತೆಯಲ್ಲಿ ಕಾಂಗ್ರೆಸ್ ನಾಯಕರು ಕೂಡ ಭಾಗಿಯಾಗಿದ್ದಾರೆ. ಮುಸ್ಲಿಂ ಮಹಿಳೆಯರಿಂದ ರಾಹುಲ್ ಗಾಂಧಿಗೆ ಪೋಸ್ಟರ್ ಮೂಲಕ ಬೆಂಬಲ ಘೋಷಿಸಲಾಗಿದೆ. ಉದ್ಯೋಗಕ್ಕಾಗಿ ನಡಿಗೆ ಎಂದು ರಾಹುಲ್ ಜೊತೆ ಹೆಜ್ಜೆ ಹಾಕಿದ್ದಾರೆ. ವಿ ಆರ್ ವಾಕಿಂಗ್ ಫಾರ್ ಜಾಬ್ ಎಂಬ ಪ್ಲೇ ಕಾರ್ಡ್ ಹಿಡಿದು ಮೈಸೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹೆಜ್ಜೆ ಹಾಕಿದ್ದಾರೆ.
ಇದೇ ಮೊದಲ ಬಾರಿಗೆ ಭಾರತ್ ಜೋಡೋ ಯಾತ್ರೆಯಲ್ಲಿ ಸೋನಿಯಾ ಗಾಂಧಿ ಕುಟುಂಬ ರಾಜ್ಯದಲ್ಲಿ ಹೆಜ್ಜೆ ಹಾಕಲಿದೆ. ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಎಲ್ಲರೂ ಒಟ್ಟಾಗಿ ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವು ಭಾರತ್ ಜೋಡೋ ಯಾತ್ರೆಯ ಮೂಲಕ ಜನರ ವಿಶ್ವಾಸವನ್ನು ಗಳಿಸಿಕೊಳ್ಳುವ ಪ್ರಯತ್ನದಲ್ಲಿದೆ.
ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಸೋನಿಯಾ ಗಾಂಧಿ ಮೈಸೂರಿಗೆ ಆಗಮಿಸಲಿದ್ದಾರೆ. ಇಲ್ಲಿಂದ ಹೆಲಿಕಾಪ್ಟರ್ನಲ್ಲಿ ಸೋನಿಯಾ ಗಾಂಧಿ ಮಡಿಕೇರಿಗೆ ಪ್ರಯಾಣ ಬೆಳೆಸಲಿದ್ದಾರೆ. ಇತ್ತ ರಾಹುಲ್ ಗಾಂಧಿ ಕೂಡ ತಮ್ಮ ಪಾದಯಾತ್ರೆ ಮುಗಿಸಿ ಕೊಡಗಿಗೆ ಪ್ರಯಾಣ ಬೆಳೆಸಲಿದ್ದಾರೆ. ನಾಳೆ ಹಾಗೂ ನಾಡಿದ್ದು ಭಾರತ್ ಜೋಡೋ ಯಾತ್ರೆಗೆ ರಜಾ ಇರಲಿದೆ.
ಹೀಗಾಗಿ ನಾಳೆ ಹಾಗೂ ನಾಡಿದ್ದು ಸೋನಿಯಾ ಗಾಂಧಿ ಹಾಗೂ ರಾಹುಲ್ ಕೊಡಗಿನಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ಅಕ್ಟೋಬರ್ ಆರರಿಂದ ಮಂಡ್ಯ ಜಿಲ್ಲೆಯ ಮಹದೇಶ್ವರಿ ದೇವಸ್ಥಾನದಿಂದ ಮತ್ತೆ ಪಾದಯಾತ್ರೆ ಆರಂಭಗೊಳ್ಳಲಿದೆ. ಮೇಲುಕೋಟೆಯಲ್ಲಿ ರಾಹುಲ್ ಗಾಂಧಿಗೆ ಸೋನಿಯಾ ಗಾಂಧಿ ಸಾಥ್ ನೀಡಲಿದ್ದಾರೆ. ಇದಾದ ಬಳಿಕ ಅಕ್ಟೋಬರ್ ಏಳರಂದು ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ರಾಹುಲ್ ಗಾಂಧಿ ಜೊತೆ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಲು ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ನಾಗಮಂಗಲದಲ್ಲಿ ಪಾದಯಾತ್ರೆಯಲ್ಲಿ ಭಾಗಿಯಾಗಲಿರುವ ಪ್ರಿಯಾಂಕಾ ಗಾಂಧಿ ಬಳಿಕ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ.
ಇದನ್ನು ಓದಿ : Road Safety World Series 2022: ಸಚಿನ್ ನಾಯಕತ್ವದಲ್ಲಿ ಚಾಂಪಿಯನ್ ಪಟ್ಟಕ್ಕೇರಿದ ಇಂಡಿಯಾ ಲೆಜೆಂಡ್ಸ್
ಇದನ್ನೂ ಓದಿ : Aishwarya Pise was eliminated :ಮೊದಲವಾರವೇ ಬಿಗ್ಬಾಸ್ ಮನೆಯಿಂದ ಹೊರಬಿದ್ದ ಲೇಡಿ ಬೈಕರ್ ಐಶ್ವರ್ಯಾ ಪಿಸೆ
Sonia, Priyanka Gandhi will arrive in Karnataka for Rahul Bharat Jodo Yatra