ಬೆಂಗಳೂರು : ಲಾಕ್ ಡೌನ್ ಹಿನ್ನೆಲೆಯಲ್ಲಿ ಅನುದಾನಿತ ಶಾಲಾ ಶಿಕ್ಷಕರು ಕೂಡ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಅಸಂಘಟಿತ ವಲಯಕ್ಕೆ ಪ್ಯಾಕೇಜ್ ಘೋಷಿಸಿದಂತೆ ಅನುದಾನರಹಿತ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರಿಗೂ ಸರಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕೆಂದು ಮಾಜಿ ಪ್ರಧಾನಿ ಅಧ್ಯಕ್ಷ ಹೆಚ್.ಡಿ.ದೇವೇಗೌಡ ರಾಜ್ಯ ಸರಕಾರಕ್ಕೆ ಆಗ್ರಹಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಈಗಾಗಲೇ ಪತ್ರ ಬರೆದಿರುವ ಎಚ್.ಡಿ.ದೇವೇಗೌಡರು, ಖಾಸಗಿ ವಲಯದಲ್ಲಿ ವೃತ್ತಿ ನಿರ್ವಹಿಸುತ್ತಿರುವ ಶಿಕ್ಷಕರಿಗೆ ಆರ್ಥಿಕ ಸಮಸ್ಯೆಯಾಗಿದೆ. ಶೈಕ್ಷಣಿಕ ಉನ್ನತಿಗಾಗಿ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಶಿಕ್ಷಕರ ಕೊಡುಗೆ ಅಪಾರ. ಲಾಕ್ ಡೌನ್ ಹಿನ್ನೆಲೆಯಲ್ಲಿ ಉಂಟಾಗಿರುವ ಆರ್ಥಿಕ ಹೊರೆಯಿಂದಾಗಿ ಶಿಕ್ಷಕರಿಗೆ ವೇತನ ನೀಡಲು ಶಿಕ್ಷಣ ಸಂಸ್ಥೆಗಳಿಗೆ ಸಮಸ್ಯೆಯಾಗಿದೆ.

ಇನ್ನು ಸರಕಾರ ಖಾಸಗಿ ಅನುದಾನರಹಿತ ಆಡಳಿತ ಮಂಡಳಿಗೆ ಶಿಕ್ಷಣ ಇಲಾಖೆ ಆರ್ಟಿಇ ಬಾಕಿಯನ್ನೂ ಪಾವತಿಸಿಲ್ಲ, ಹೀಗಾಗಿ ಶಿಕ್ಷಣ ಸಂಸ್ಥೆಗಳಿಗೆ ವೇತನ ನೀಡಲು ಸಾಧ್ಯವಾಗಿಲ್ಲ.

ಶಿಕ್ಷಕರ ಪ್ರಸ್ತುತ ಆರ್ಥಿಕ ತೊಂದರೆ ನೀಗಿಸಲು ಸರ್ಕಾರ ಕೂಡಲೇ 1300 ಕೋಟಿ ರೂ. ಆರ್ಟಿಇ ಬಾಕಿ ಹಣವನ್ನು ಕೂಡಲೇ ಬಿಡುಗಡೆಗೆ ಒತ್ತಾಯಿಸಿದ್ದಾರೆ. ಅಲ್ಲದೇ ಕೂಡಲೇ ಮುಖ್ಯಮಂತ್ರಿಗಳು ಶಿಕ್ಷಣ ಸಚಿವರು, ಶಿಕ್ಷಣ ಇಲಾಖೆಯ ಅಧಿಕಾರಿಗಳ ಸಭೆ ಕರೆದು ಸಮಾಲೋಚನೆ ನಡೆಸಿ ಶಿಕ್ಷಕರ ಹಿತ ಕಾಯುವಂತೆ ಪತ್ರ ಮೂಲಕ ದೇವೇಗೌಡ ಮನವಿ ಮಾಡಿದ್ದಾರೆ.