ಬೆಂಗಳೂರು : KR Puram inspector death : ಕರ್ತವ್ಯ ಲೋಪದ ಹಿನ್ನಲೆಯಲ್ಲಿ ಸಸ್ಪೆಂಡ್ ಆಗಿದ್ದ ಕೆ.ಆರ್.ಪುರಂ ಸರ್ಕಲ್ ಇನ್ಸ್ಪೆಕ್ಟರ್ ನಂದೀಶ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸಸ್ಪೆಂಡ್ ಆದ ನಂತರದಲ್ಲಿ ನಂದೀಶ್ ಅವರು ಖಿನ್ನತೆಗೆ ಒಳಗಾಗಿದ್ದರು.
ಹುಣಸೂರು ಮೂಲದ ಇನ್ಸ್ ಪೆಕ್ಟರ್ ನಂದೀಶ್ ಇತ್ತೀಚೆಗೆ ಪಬ್ ವೊಂದು ಅವಧಿ ಮೀರಿ ನಡೆಸಲು ಸಹಕಾರ ನೀಡುತ್ತಿದ್ದರೆಂಬ ಆರೋಪದ ಹಿನ್ನೆಲೆಯಲ್ಲಿ ಅವರನ್ನು ಅಮಾನತ್ತು ಗೊಂಡಿದ್ದರು. ಅಲ್ಲದೇ ಅಮಾನತ್ತು ತೆರವು ಮಾಡಿ ರಿವೋಕ್ ಮಾಡುವಂತೆ ಅಧಿಕಾರಿಗಳಲ್ಲಿ ಮನವಿ ಮಾಡಿಕೊಂಡಿದ್ದರು. ಆದರೆ ರಿವೋಕ್ ಆಗದ ಹಿನ್ನೆಲೆಯಲ್ಲಿ ಅವರು ಸಾಕಷ್ಟು ಮನನೊಂದಿದ್ದರು ಎಂದು ತಿಳಿದು ಬಂದಿದೆ.
ಬೆಂಗಳೂರಿನ ಹೊರವಲಯದ ತಾವರೆಕೆರೆ, ಪರಪ್ಪನ ಅಗ್ರಹಾರದಲ್ಲಿ 2019 ರಿಂದ 2020ರವರೆಗೆ ಕಾರ್ಯ ನಿರ್ವಹಿಸಿದ್ದರು. ಅಲ್ಲದೇ ಇತ್ತೀಚಿಗೆ ಕೆಆರ್ ಪುರಂ ವೃತ್ತ ನಿರೀಕ್ಷಕ ರಾಗಿಯೂ ಸೇವೆ ಸಲ್ಲಿಸಿದ್ದರು. ಕೆಲಸದಿಂದ ಸಸ್ಪೆಂಡ್ ಆದ ದಿನದಿಂದಲೂ ನಂದೀಶ್ ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎಂದು ತಿಳಿದು ಬಂದಿದೆ. ಇಂದು ಹೃದಯಾಘಾತ ವಾಗುತ್ತಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿ ಆಗದೆ ಅವರನ್ನು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕೆ.ಆರ್.ಪುರಂ ಠಾಣಾ ವ್ಯಾಪ್ತಿಯ ಟಾನಿಕ್ ಬಾರ್ ರಾತ್ರಿ 2 ಗಂಟೆಯ ವರೆಗೂ ತೆರೆದಿತ್ತು. ಈ ಕುರಿತು ಮಾಹಿತಿ ಕಲೆಹಾಕಿದ್ದ ಸಿಸಿಬಿ ಅಧಿಕಾರಿಗಳು ಬಾರ್ ಮೇಲೆ ದಾಳಿ ನಡೆಸಿದ್ದು, ಮಾಲೀಕರ ವಿರುದ್ದ ಕೆ.ಆರ್.ಪುರಂ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಬೆಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ರಾತ್ರಿ ಒಂದು ಗಂಟೆಯವರೆಗೂ ಬಾರ್ ತೆರೆಯಲು ಅವಕಾಶ ನೀಡಲಾಗಿತ್ತು. ಆದ್ರೆ ಈ ಬಾರ್ ಮಾತ್ರ ರಾತ್ರಿ ಎರಡು ಗಂಟೆಯವರೆಗೂ ಕಾರ್ಯನಿರ್ವಹಿಸುತ್ತಿತ್ತು. ಈ ವಿಚಾರ ಇನ್ಸ್ ಪೆಕ್ಟರ್ ನಂದೀಶ್ ಅವರ ಗಮನಕ್ಕೆ ಬಂದಿದ್ದರೂ ಕೂಡ ಯಾವುದೇ ಕ್ರಮಕೈಗೊಂಡಿರಲಿಲ್ಲ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳು ನೀಡಿದ ವರದಿಯನ್ನು ಆಧರಿಸಿ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಅವರು ಇನ್ಸ್ ಪೆಕ್ಟರ್ ನಂದೀಶ್ ಅವರನ್ನು ಅಮಾನತ್ತುಗೊಳಿಸಿ ಆದೇಶ ಹೊರಡಿಸಿದ್ದರು.
ಇದನ್ನೂ ಓದಿ : UP Kannauj : ಸರಕಾರಿ ಅತಿಥಿ ಗೃಹದಲ್ಲಿ 12 ವರ್ಷದ ಬಾಲಕಿ ಮೇಲೆ ಅತ್ಯಾಚಾರ
ಇದನ್ನೂ ಓದಿ :ಹುಡುಗಿಯನ್ನು ’ಐಟಂ’ ಎಂದು ಕರೆಯುವುದು ಕೇವಲ ಲೈಂಗಿಕ ಉದ್ದೇಶದಿಂದ : ಮುಂಬೈ ಕೋರ್ಟ್
KR Puram inspector Nandeesh death Due to Heart Attack