ಬೆಂಗಳೂರ : ಮಾಜಿ ಭೂಗತ ದೊರೆ, ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಎನ್.ಮುತ್ತಪ್ಪ ರೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮುತ್ತಪ್ಪ ರೈ ಅವರಿಗೆ ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ರೈ ಸಂಬಂಧಿಕರು ಬೆಂಗಳೂರಿಗೆ ತೆರಳಿದ್ದಾರೆ ಎನ್ನಲಾಗುತ್ತಿದೆ.

ಕಳೆದ ಐದು ತಿಂಗಳಿನಿಂದಲೂ ಮುತ್ತಪ್ಪ ರೈ ಕ್ಯಾನ್ಸರ್ ನಿಂದ ಬಳಲುತ್ತಿರುವುದನ್ನು ಖುದ್ದು ಮುತ್ತಪ್ಪ ರೈ ಖಚಿತಪಡಿಸಿದ್ದರು. ಅನಾರೋಗ್ಯದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಅಥ್ಲೆಟಿಕ್ ಅಸೋಸಿಯೇಷನ್ನ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿದ್ದರು. ಅಲ್ಲದೇ ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಹಾಗೂ ರಾಜ್ಯಾಧ್ಯಕ್ಷರಾಗಿದ್ದ ಮುತ್ತಪ್ಪ ರೈ ರಾಜ್ಯಾಧ್ಯಕ್ಷ ಸ್ಥಾನವನ್ನೂ ತೊರೆದಿದ್ದರು. ಕಳೆದ ಕೆಲ ದಿನಗಳಿಂದಲೂ ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.